ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ಕಾಂಗ್ರೆಸ್ ನ ಒಳಸಂಚು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಒಳಸಂಚು ಅಡಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶುಕ್ರವಾರ ಹೇಳಿದರು.

ಹುಬ್ಬಳ್ಳಿ: ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಒಳಸಂಚು ಅಡಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶುಕ್ರವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ವಯಸ್ಸೇನು, ಅವರ ಹಿರಿತನವೇನು, ಅವರ ಸ್ಥಾನಮಾನವೇನು, ಅವರ ವಿರುದ್ಧ ಈ ರೀತಿ ಷಡ್ಯಂತ್ರ ಮಾಡುವುದು ಎಂದರೆ ಎಂಥಾ ಅನ್ಯಾಯವಿದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಒಬ್ಬ ಪ್ರಭಾವಿ, ಹಿರಿಯ ರಾಜಕಾರಣಿ ಮೇಲೆ ಈ ರೀತಿ ಸುಳ್ಳು ದೂರು ದಾಖಲಿಸುವುದು ನಿಜಕ್ಕೂ ಅಕ್ಷಮ್ಯ, ಈ ಸಂಬಂಧ ಕಾನೂನು ರೀತಿ ತನಿಖೆ ಆಗುತ್ತದೆ. ಅವರು ಇದರಿಂದ ಹೊರಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶಾದ್ಯಂತ ಎಲ್ಲಾ ಯುವ ಮತದಾರರು ಪ್ರಧಾನಿ ಮೋದಿಯವರ ಅಭಿಮಾನಿಗಳಾಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತಾರೆಂಬ ವಿಶ್ವಾಸವಿದೆ. ಶೇ 90ರಷ್ಟು ಹೊಸ ಮತದಾರರಲ್ಲಿ ಮೋದಿಗೆ ಅಪಾರ ಅನುಯಾಯಿಗಳೂ ಇದ್ದಾರೆ. ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



