ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣ: 50ಕ್ಕೂ ಹೆಚ್ಚು ಮಂದಿ ವಿರುದ್ಧ ದೂರು ದಾಖಲಿಸಿದ್ದ ಮಹಿಳೆ!
ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿರುವ ಮಹಿಳೆ, ಈ ಹಿಂದೆ ಕೂಡ 50ಕ್ಕೂ ಹೆಚ್ಚು ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆಂದು ಪೊಲೀಸರು ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿರುವ ಮಹಿಳೆ, ಈ ಹಿಂದೆ ಕೂಡ 50ಕ್ಕೂ ಹೆಚ್ಚು ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ಹೇಳಿಕೆ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಮಹಿಳೆ ಆಗಾಗ್ಗೆ ದೊಡ್ಡ ದೊಡ್ಡ ವ್ಯಕ್ತಿಗಳು ಹಾಗೂ ಸಾಮಾನ್ಯ ಜನರ ವಿರುದ್ಧ ದೂರು ದಾಖಲಿಸುತ್ತಿರುತತಾರೆ. ಈ ಹಿಂದೆ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಕಾಂಗ್ರೆಸ್ ನಾಯಕ ವಿ.ಎಸ್ ಉಗ್ರಪ್ಪ ವಿರುದ್ಧವೂ ದೂರು ದಾಖಲಿಸಿದ್ದರು. ತನ್ನ ನೆರೆಹೊರೆಯವರು, ಆಕೆ ವಾಸವಿರುವ ಅಪಾರ್ಟ್‌ಮೆಂಟ್ ನೋಡಿಕೊಳ್ಳುವ ನಿವಾಸಿಗಳ ಕಲ್ಯಾಣ ಸಂಘದ ವಿರುದ್ಧವೂ ದೂರು ನೀಡಿದ್ದರು ಎಂದು ಹೇಳಿದ್ದಾರೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಉಗ್ರಪ್ಪ ಅವರ, ನಾಲ್ಕು ವರ್ಷಗಳ ಹಿಂದೆ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಮಹಿಳೆ ದೂರು ನೀಡಿದ್ದಾರೆ. ಆ ಬಗ್ಗೆ ನನಗೆ ಇಂದು ಮಾಹಿತಿ ತಿಳಿದುಬಂದಿದೆ. ಎಂದು ಹೇಳಿದ್ದಾರೆ.
ನಾನು ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ಸಮಿತಿಯ ಮುಖ್ಯಸ್ಥನಾಗಿದ್ದೆ. ಆ ಸಂದರ್ಭದಲ್ಲಿ ನನ್ನ ಬಳಿ ಬಂದ ಮಹಿಳೆ, ಕೌಟುಂಬಿಕ ದೌರ್ಜನ್ಯಕ್ಕೆ ಸಂಬಂಧಿಸಿದ ತನ್ನ ದೂರನ್ನು ಅಧಿಕಾರಿ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು ಎಂದು ತಿಳಿಸಿದ್ದಾರೆ.
ಆಕೆ ಏನು ಹೇಳುತ್ತಿದ್ದಾಳೆಂಬುದಕ್ಕೆ ಆಕೆಯ ಬಳಿ ಸಾಕ್ಷ್ಯಾಧಾರಗಳಿರಲಿಲ್ಲವ, ಸಾಕ್ಷ್ಯ ತೋರಿಸುವಂತೆ ಕೇಳಿದ್ದವು. ನಂತರ ಪೊಲೀಸ್ ಆಯುಕ್ತ ಕಚೇರಿಗೆ ತೆರಳಿ ನಮ್ಮ ವಿರುದ್ಧ ದೂರು ನೀಡಿದ್ದಳು ಎಂದು ಹೇಳಿದ್ದಾರೆ.
ಗೃಹ ಸಚಿವರ ಕಚೇರಿಗೂ ತೆರಳಿ ಮನವಿ ಸಲ್ಲಿಸಿದ್ದಾಳೆ. ಆಕೆ ನೀಡಿರುವ ಹಲವು ದೂರುಗಳ ಪೈಕಿ ಕೆಲವು ಪ್ರಕರಣಗಳಲ್ಲಿ ಮಾತ್ರವೇ ಎಫ್ಐಆರ್ ದಾಖಲಾಗಿವೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



