ಉಪನಗರ ರೈಲು ಯೋಜನೆಯ ಮೊದಲ ಮಾರ್ಗ 2025ರ ಡಿಸೆಂಬರ್‌ಗೆ ಪೂರ್ಣ: ಎಂಬಿ ಪಾಟೀಲ್
ಬಿಎಸ್‌ಆರ್‌ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು...

ಬೆಂಗಳೂರು: ಬಿಎಸ್‌ಆರ್‌ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು, ಇದರಲ್ಲಿ ದೇಶದಲ್ಲೇ ಅತಿ ಉದ್ದದ ಗರ್ಡರ್ ಬಳಸಲಾಗುತ್ತಿದೆ ಎಂದು ಸಚಿವ ಎಂಬಿ ಪಾಟೀಲ್ ಅವರು ಶನಿವಾರ ಹೇಳಿದರು.
ದೇಶದಲ್ಲೇ ಅತಿ ಉದ್ದದ (100 ಅಡಿ ಅಥವಾ 31 ಮೀಟರ್) ಯು-ಗರ್ಡರ್ ನಿರ್ಮಾಣ ಪ್ರಕ್ರಿಯೆಯನ್ನು ವೀಕ್ಷಿಸಲು ದೇವನಹಳ್ಳಿ ಬಳಿಯ ಗೊಲ್ಲಹಳ್ಳಿಯ ಕ್ಯಾಸ್ಟಿಂಗ್ ಕಾರ್ಯಾಗಾರಕ್ಕೆ ಭೇಟಿ ನೀಡಿದ ಅವರು ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಎಂಜಿನಿಯರಿಂಗ್ ಅದ್ಭುತ ಈ ಎನ್ನಲಾಗಿರುವ ಈ 100 ಅಡಿ ಉದ್ದದ ಯು-ಗರ್ಡರ್ ಅನ್ನು ದೇಶದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ಉಪನಗರ ರೈಲು ಯೋಜನೆಗೆ ಬಳಸಲಾಗುತ್ತಿದೆ. ಮಲ್ಲಿಗೆ ಕಾರಿಡಾರ್ ನ (ನಂಬರ್ 2) ಭಾಗವಾದ ಹೆಬ್ಬಾಳ- ಯಶವಂತಪುರದ 8 ಕಿಮೀ ನಡುವೆ ಇಂತಹ ಸುಮಾರು 450 ಯು-ಗರ್ಡರ್ ಗಳನ್ನು ಬಳಸಲಾಗುತ್ತದೆ. ಇದಕ್ಕೆ ಮುಂಚೆ, ದೇಶದಲ್ಲಿ ಬೇರೆ ರೈಲ್ವೆ ಯೋಜನೆಗಳಲ್ಲಿ 28 ಮೀ. ಉದ್ದದ ಯು- ಗರ್ಡರ್ ಗಳನ್ನು ಬಳಸಲಾಗುತ್ತಿತ್ತು ಎಂದು ಹೇಳಿದರು.
ಈ ಎಲ್‌ಆಂಡ್‌ಟಿ ಕ್ಯಾಸ್ಟಿಂಗ್ ಯಾರ್ಡ್‌ನಲ್ಲಿ ಐ-ಗರ್ಡರ್ ಮತ್ತು ಫೈಯರ್ ಕ್ಯಾಪ್‌ಗಳನ್ನು ಕೂಡ ಕ್ಯಾಸ್ಟಿಂಗ್ ಮಾಡಲಾಗುತ್ತದೆ. ಮೇಲಿನ ಮಾರ್ಗದಲ್ಲಿ ಇಂತಹ 323 ಐ-ಗರ್ಡರ್, 283 ಫೈಯರ್ ಕ್ಯಾಪ್ ಗಳನ್ನು ಬಳಸಲಾಗುತ್ತದೆ. ಉಪನಗರ ರೈಲು ಯೋಜನೆಗೆ ಸಂಬಂಧಿಸಿದಂತೆ ಈವರೆಗೆ ಶೇಕಡ 20ರಷ್ಟು ಕಾಯಂ ಕಾಮಗಾರಿಗಳು ಮುಗಿದಿವೆ. ಕಾರಿಡಾರ್ -2ರಲ್ಲಿ (ಚಿಕ್ಕಬಾಣಾವರ-ಬೆನ್ನಿಗಾನಹಳ್ಳಿ) ಅಗತ್ಯವಿರುವ 120.44 ಎಕರೆ ಭೂಮಿಯ ಪೈಕಿ 119.18 ಎಕರೆ ಜಮೀನು (ಶೇಕಡ 98.5 ರಷ್ಟು) ಈಗಾಗಲೇ ಸ್ವಾಧೀನಗೊಂಡಿದೆ” ಎಂದು ತಿಳಿಸಿದರು.
ಕಾರಿಡಾರ್ – 2ರಲ್ಲಿ ಉತ್ತಮವಾಗಿ ಕೆಲಸ ನಡೆಯುತ್ತಿದೆ. ನಾಗರಿಕ ಸೇವೆಗಳನ್ನು ಸ್ಥಳಾಂತರಿಸುವ ಬಗ್ಗೆ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಬಿಎಸ್ಎನ್ಎಲ್ ಹಾಗೂ ಇನ್ನಿತರ ಖಾಸಗಿ ಸಂಸ್ಥೆಗಳ ಜೊತೆ ಮಾತುಕತೆ ನಡೆಯುತ್ತಿದೆ. ಕೆಂಗೇರಿ- ವೈಟ್ ಫೀಲ್ಡ್ ಕಾರಿಡಾರನಲ್ಲಿ ಕೆಂಗೇರಿ- ಕಂಟೋನ್ಮೆಂಟ್ ನಡುವೆ ಉಪನಗರ ಯೋಜನೆ ಜಾರಿಗೆ ಯಾವ ಆತಂಕವೂ ಇಲ್ಲ. ಆದರೆ, ಟ್- ವೈಟ್ ಫೀಲ್ಡ್ ನಡುವೆ ಜಾಗದ ಸಮಸ್ಯೆ ಇದ್ದು, ಇಲ್ಲಿ ಎತ್ತರಿಸಿದ ಮಾರ್ಗ ನಿರ್ಮಿಸಬೇಕೆ ಅಥವಾ ಬೇರೆ ಯಾವ ರೀತಿಯಲ್ಲಿ ಯೋಜನೆ ಅನುಷ್ಠಾನ ಮಾಡಬಹುದು ಎಂಬುದರ ಬಗ್ಗೆ ರೈಲ್ವೆ ಜತೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು,
ಒಟ್ಟಾರೆ, ರೂ 15,677 ಕೋಟಿಯ ಯೋಜನೆಯ ನಾಲ್ಕೂ ಕಾರಿಡಾರ್ ಗಳ 148.17 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಮಗಾರಿ ಡಿಸೆಂಬರ್ 2027ಕ್ಕೆ ಮುಗಿಯಲಿದೆ. ಈ ಗುರಿಗೆ ಪೂರಕವಾಗಿ ರೈಲ್ವೆ ಇಲಾಖೆಯು ಸಿ-1 ಮತ್ತು ಸಿ- 3 ಕಾರಿಡಾರ್ ಗಳ ಕಾಮಗಾರಿಗಾಗಿ ಒತ್ತುವರಿ ತೆರವುಗೊಳಿಸಿದ ಭೂಮಿಯನ್ನು ನಮಗೆ ಹಸ್ತಾಂತರಿಸಬೇಕು ಹಾಗೂ ಡಿಪಿಆರ್ ನಲ್ಲಿ ಇರುವಂತೆ ಅಲೈನ್ಮೆಂಟಿಗೆ ಅನುಮತಿ ನೀಡಬೇಕು ದು ಕೋರಿದರು.
ರೈಲ್ವೆ ಇಲಾಖೆಯು ಮುಂಬರುವ ವರ್ಷಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ವರ್ತುಲ ರೈಲ್ವೆ ಯೋಜನೆಗೆ ಉಪನಗರ ರೈಲು ಯೋಜನೆಯನ್ನು ಸಂಪರ್ಕಿಸುವ ಜೊತೆಗೆ ಅದನ್ನು ಬೆಂಗಳೂರು ಸುತ್ತಲ ಉಪನಗರಗಳಿಗೆ ವಿಸ್ತರಿಸುವ ಬಗ್ಗೆಯೂ ಕೆ-ರೈಡ್ ಈಗಾಗಲೇ ಚಿಂತನೆ ನಡೆಸುತ್ತಿದೆ. ಇದರ ಬಗ್ಗೆ ರೈಲ್ವೆ ಇಲಾಖೆ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
ರೈಲ್ವೆ ಇಲಾಖೆಯು ಮುಂಬರುವ ವರ್ಷಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ವರ್ತುಲ ರೈಲ್ವೆ ಯೋಜನೆಗೆ ಉಪನಗರ ರೈಲು ಯೋಜನೆಯನ್ನು ಸಂಪರ್ಕಿಸುವ ಜೊತೆಗೆ ಅದನ್ನು ಬೆಂಗಳೂರು ಸುತ್ತಲ ಉಪನಗರಗಳಿಗೆ ವಿಸ್ತರಿಸುವ ಬಗ್ಗೆಯೂ ಕೆ-ರೈಡ್ ಈಗಾಗಲೇ ಚಿಂತನೆ ನಡೆಸುತ್ತಿದೆ. ಇದರ ಬಗ್ಗೆ ರೈಲ್ವೆ ಇಲಾಖೆ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆ- ರೈಡ್ ವ್ಯವಸ್ಥಾಪಕ ನಿರ್ದೇಶಕಿ ಡಾ.ಎನ್.ಮಂಜುಳಾ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




