ರಾಜ್ಯದಲ್ಲಿ ನೀರಿನ ಅಭಾವ, ಬರ ಪರಿಹಾರ ವಿಚಾರಗಳ ಬಗ್ಗೆ ಪ್ರಧಾನಿ ಉತ್ತರಿಸಲಿ: ಕಾಂಗ್ರೆಸ್
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿನ ಕೆಲವು ಪ್ರಮುಖ ವಿಚಾರಗಳ ಬಗ್ಗೆ ಅವರು ಪ್ರಧಾನಿ ಅವರಿಂದ ಕಾಂಗ್ರೆಸ್ ಉತ್ತರ ಬಯಸಿದೆ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿನ ಕೆಲವು ಪ್ರಮುಖ ವಿಚಾರಗಳ ಬಗ್ಗೆ ಅವರು ಪ್ರಧಾನಿ ಅವರಿಂದ ಕಾಂಗ್ರೆಸ್ ಉತ್ತರ ಬಯಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಕರ್ನಾಟಕ ರಾಜ್ಯದಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು, ರಾಜ್ಯದ ಬಹುತೇಕ ಭಾಗ ಬರಪೀಡಿತವಾಗಿವೆ. 236 ತಾಲೂಕುಗಳ ಪೈಕಿ 223 ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ 18,172 ಕೋಟಿ ಬರ ಪರಿಹಾರಕ್ಕೆ ಮನವಿ ಮಾಡಿದೆ. ಮೋದಿ ಸರ್ಕಾರ ಕರ್ನಾಟಕದ ಜನರಿಗೆ ನೆರವು ನೀಡಲು ನಿರಾಕರಿಸಿರುವುದೇಕೆ?ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ವರಿಷ್ಠರ ಸಂಧಾನ ವಿಫಲ: ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳದ ಈಶ್ವರಪ್ಪ, ಸ್ವತಂತ್ರ ಸ್ಪರ್ಧೆ ಖಚಿತ!
ಬರ ಪೀಡಿತ ಗ್ರಾಮೀಣ ಪ್ರದೇಶದ ಆರ್ಥಿಕತೆ ಸುಧಾರಿಸಲು ಕರ್ನಾಟಕ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾನವ ಕೂಲಿ ದಿನಗಳನ್ನು 100ರಿಂದ 150 ದಿನಗಳಿಗೆ ಏರಿಕೆ ಮಾಡಲು ಮನವಿ ಮಾಡಿದೆ. ಬರ ಪೀಡಿತ ಪ್ರದೇಶಗಳಲ್ಲಿ ಈ ಏರಿಕೆ ಮಾಡಲು ಕೂನೂನಿನಲ್ಲಿ ಅವಕಾಶವಿದೆ. ಆದರೂ ಇದನ್ನು ಹೆಚ್ಚಿಸಲು ಮೋದಿ ಸರ್ಕಾರ ವಿಫಲವಾಗಿದೆ. ಇದರ ಜೊತೆಗೆ ನರೇಗಾ ಯೋಜನೆಯಲ್ಲಿ ಕೂಲಿ ಕಾರ್ಮಿಕರಿಗೆ ನೀಡುವ ವೇತನದ 1600 ಕೋಟಿ ಹಣವನ್ನು ಬಿಡುಗಡೆ ಮಾಡಲು ಮೋದಿ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಮೋದಿ ಸರ್ಕಾರ ನರೇಗಾ ಕಾರ್ಮಿಕರ ಕೂಲಿ ಯಾವಾಗ ಬಿಡುಗಡೆ ಮಾಡಲಿದೆ?ಎಂದು ಕೇಳಿದ್ದಾರೆ.
ಕರ್ನಾಟಕದಲ್ಲಿ 2023ರಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ಮೂಲಕ ಬಡವರಿಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಮುಂದಾಗಿದ್ದು, ಮೋದಿ ಸರ್ಕಾರ ಇದಕ್ಕೆ ಅಡ್ಡಿಪಡಿಸುತ್ತಿದೆ. ಆರಂಭದಲ್ಲಿ ಕರ್ನಾಟಕ ರಾಜ್ಯಕ್ಕೆ ಪ್ರತಿ ಕೆ.ಜಿ ಅಕ್ಕಿಗೆ ₹34 ನಂತೆ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಮಾರಾಟ ಮಾಡಲು ಭಾರತೀಯ ಆಹಾರ ಪ್ರಾಧಿಕಾರ ಒಪ್ಪಿಗೆ ನೀಡಿತ್ತು. ನಂತರ ಅದನ್ನು ನಿರಾಕರಿಸಿತು. 2023ರ ನವೆಂಬರ್ ನಲ್ಲಿ ಆಹಾರ ಪ್ರಾಧಿಕಾರದ ದಾಸ್ತಾನಿನಲ್ಲಿ ದುಪ್ಪಟ್ಟು ಪ್ರಮಾಣದ ಅಕ್ಕಿ ಶೇಖರಣೆ ಇದ್ದು, ಕರ್ನಾಟಕ ರಾಜ್ಯಕ್ಕೆ ಅಕ್ಕಿ ನೀಡದೇ ಖಾಸಗಿಯವರಿಗೆ ಅಕ್ಕಿ ಮಾರಾಟ ಮಾಡಲಾಗಿದೆ. ಕೇಂದ್ರ ಸರ್ಕಾರ ದ್ವೇಷ ರಾಜಕೀಯಕ್ಕಾಗಿ ಕರ್ನಾಟಕ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿಯನ್ನು ಮಾರಾಟ ಮಾಡಲು ನಿರಾಕರಿಸಿದೆಯೆ? ಎಂದು ಪ್ರಶ್ನಿಸಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘವೇಂದ್ರ ಅವರು ಸಂಸದರಾಗಿದ್ದು, ಮತ್ತೊಬ್ಬ ಪುತ್ರ ಬಿ.ವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ಪ್ರಧಾನಮಂತ್ರಿಗಳು ಶಿವಮೊಗ್ಗದಲ್ಲಿ ಇರುವ ಕಾರಣ ಕುಟುಂಬ ರಾಜಕಾರಣ ವಿಚಾರದಲ್ಲಿ ಬಿಜೆಪಿಯ ನಿಲುವೇನು? ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


