ರಾಹುಲ್ ಗಾಂಧಿ 'ಶಕ್ತಿ' ಹೇಳಿಕೆ ವಿರುದ್ಧ ಪ್ರಧಾನಿ ವಾಗ್ದಾಳಿ; ರಾಜ್ಯದಲ್ಲಿ ಸೂಪರ್ ಸಿಎಂ ಗಳಿದ್ದಾರೆ- ಮೋದಿ ಟೀಕೆ
ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದು, ಶಕ್ತಿ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದು, ಶಕ್ತಿ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ವರಿಷ್ಠರ ಸಂಧಾನ ವಿಫಲ: ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳದ ಈಶ್ವರಪ್ಪ, ಸ್ವತಂತ್ರ ಸ್ಪರ್ಧೆ ಖಚಿತ!
ಶಕ್ತಿಯನ್ನು ನಿರ್ನಮಾ ಮಾಡುವುದಕ್ಕಾಗಿ ಇಂಡಿ ಮೈತ್ರಿಕೂಟವನ್ನು ರಚಿಸಲಾಯಿತು ಎಂಬ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಅವರು ಶಕ್ತಿಯನ್ನು ನಾಶ ಮಾಡಲು ಯತ್ನಿಸಿದರೆ, ನಮ್ಮದು ಶಕ್ತಿಯನ್ನು ಪೂಜಿಸುವ ಸಂಕಲ್ಪವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಭಾನುವಾರ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮುಕ್ತಾಯದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಮೋದಿ ವಿರುದ್ಧ ನಮ್ಮ ಹೋರಾಟವು ವೈಯಕ್ತಿಕ ಮಟ್ಟದಲ್ಲಿಲ್ಲ. ಮೋದಿ, ಶಕ್ತಿಗಾಗಿ (ಅಧಿಕಾರಕ್ಕಾಗಿ) ಇರುವ ಮುಸುಕು ಎಂದು ಹೇಳಿದ್ದರು.

ಮಾಧ್ಯಮಗಳಿಂದ ನಿರುದ್ಯೋಗ, ಹಣದುಬ್ಬರ ವಿಷಯಗಳ ನಿರ್ಲಕ್ಷ್ಯ; ಜನರೊಂದಿಗಿನ ಸಂವಹನಕ್ಕಾಗಿ ಯಾತ್ರೆ: ರಾಹುಲ್ ಗಾಂಧಿ
ಮೋದಿ 56 ಇಂಚಿನ ಎದೆ ಇಲ್ಲದ ದುರ್ಬಲ ವ್ಯಕ್ತಿ ಎಂದು ರಾಹುಲ್ ಗಾಂಧಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೂ ತಿರುಗೇಟು ನೀಡಿರುವ ಪ್ರಧಾನಿ ಮೋದಿ, ಶಿವಾಜಿ ಪಾರ್ಕ್‌ನಿಂದ ಶಕ್ತಿಯನ್ನು ಹೊರಹಾಕುವ ಘೋಷಣೆಯನ್ನು ಕೇಳಿದಾಗ, ಅದು ಬಾಳ್ ಠಾಕ್ರೆ ಅವರ ಆತ್ಮಕ್ಕೆ ಎಷ್ಟು ನೋವುಂಟು ಮಾಡುತ್ತದೆ ಎಂದು ನಾನು ಯೋಚಿಸಿದೆ.
ಪ್ರತಿ ಮಗು ಜೈ ಭವಾನಿ, ಜೈ ಶಿವಾಜಿ ಎಂಬ ಮಂತ್ರದೊಂದಿಗೆ ಬೆಳೆಯುವ ಶಿವಾಜಿ ಪಾರ್ಕ್‌ನಲ್ಲಿ ಶಕ್ತಿ ನಿರ್ಮೂಲನೆಯ ಘೋಷಣೆಯನ್ನು ಮಾಡಲಾಗಿದೆ ಎಂದು ಪ್ರಧಾನಿ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



