ಅನೈತಿಕ ಸಂಬಂಧ ಶಂಕೆ: ವಿಜಯಪುರದ ನಿಡಗುಂದಿ ಗ್ರಾಮದಲ್ಲಿ ಜೋಡಿ ಕೊಲೆ
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ಒಬ್ಬ ಪುರುಷ ಮತ್ತು ಒಬ್ಬ ಮಹಿಳೆಯನ್ನು ಕೊಲೆ ಮಾಡಲಾಗಿದೆ.

ವಿಜಯಪುರ: ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ಒಬ್ಬ ಪುರುಷ ಮತ್ತು ಒಬ್ಬ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಅವರಿಬ್ಬರೂ ಬೇರೆ ಬೇರೆಯವರಾಗಿದ್ದು, ಜತೆಯಾಗಿದ್ದಾಗ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಹಾಗಾಗಿ ಇದು ಅಕ್ರಮ ಸಂಬಂಧದ ಸಂಶಯದ ಹಿನ್ನೆಲೆಯಲ್ಲಿ ನಡೆದಿರುವ ಜೋಡಿ ಕೊಲೆ ಆಗಿರಬಹುದು ಎಂದು ಸಂಶಯಿಸಲಾಗಿದೆ. ಸೋಮವಾರ ರಾತ್ರಿ ನಿಡಗುಂದಿ ತಾಲ್ಲೂಕಿನ ಮಾರಡಗಿ ತಾಂಡಾದ ಸಮೀಪ ನಡೆದಿದೆ.
ಮೃತರು ಗಣಿ ಗ್ರಾಮದ ಸೋಮನಿಂಗಪ್ಪ ಕಲ್ಲಪ್ಪ ಕುಂಬಾರ (35) ಹಾಗೂ ಪಾರ್ವತಿ ತಳವಾರ (38) ಎಂದು ಗುರುತಿಸಲಾಗಿದೆ. ಗಣಿ ಗ್ರಾಮಕ್ಕೆ ಬರುವ ಮೊದಲೇ ಇಬ್ಬರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆ ಯಾರೂ ಮಾಡಿದರು? ಕೊಲೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಮಂಗಳವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು ಸ್ಥಳಕ್ಕೆ ನಿಡಗುಂದಿ ಪೊಲೀಸರು ಭೇಟಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



