ಯಾರು ರಾಜ: ಸಿಎಂ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಪ್ರತಾಪ್ ಸಿಂಹ
ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಗಿ, ‘ಯಾರು ರಾಜ?’ ಎಂದು ಪ್ರಶ್ನಿಸಿದ್ದನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ.

ಮೈಸೂರು: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಗಿ, ‘ಯಾರು ರಾಜ?’ ಎಂದು ಪ್ರಶ್ನಿಸಿದ್ದನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ.
ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ಹುಳುಕು ಹುಡುಕುವುದು ತಪ್ಪು. ಸಂವಿಧಾನ ಜಾರಿಯಾದ ದಿನದಿಂದ ದೇಶದಲ್ಲಿ ರಾಜ, ಮಹಾರಾಜ ಎಂಬ ಪರಿಕಲ್ಪನೆ ಇಲ್ಲ ಎಂದು ಹೇಳಿದರು,
ಯದುವೀರ್ ಒಡೆಯರ್ ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದರಲ್ಲಿ ಏನು ತಪ್ಪಿಲ್ಲ. ಈಗ ದೇಶದಲ್ಲಿ ರಾಜಾಡಳಿತ ಇಲ್ಲ. ಖಾಸಗಿ ದರ್ಬಾರ್ ವೇಳೆ ಮಾತ್ರ ರಾಜರು ಅಲ್ಲಿಗೆ ಸೀಮಿತವಾಗಿ ಮಾತ್ರ ಇರುತ್ತಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಸೈದ್ಧಾಂತಿಕವಾಗಿ ವಿರೋಧಿಸುತ್ತೇನೆ. ಆದರೆ ಯದುವೀರ್ ಬಗ್ಗೆ ನೀಡಿರುವ ಹೇಳಿಕೆ ವಿಚಾರದಲ್ಲಿ ನನ್ನ ಸಹಮತ ಇದೆ ಎಂದು ತಿಳಿಸಿದರು.
ಇದೇ ವೇಳೆ ಯದುವೀರ್ರನ್ನು ಈಗ ಮಹಾರಾಜ ಎಂದು ಕರೆಯುತ್ತೀರಾ ಅಥವಾ ಬಿಜೆಪಿ ಅಭ್ಯರ್ಥಿ ಎಂದು ಕರೆಯುತ್ತೀರಾ ಎಂದು ಮರು ಪ್ರಶ್ನೆ ಹಾಕಿದರು.
ಮುಂದುವರಿದು, ಯದುವೀರ್ ಒಡೆಯರ್ ಈಗ ಅರಮನೆಗೆ ಸೀಮಿತವಾಗಿರದೆ ಜನಪ್ರತಿನಿಧಿಯಾಗಲು ಬಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಕರೆದಿರುವುದರಲ್ಲಿ ತಪ್ಪಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



