ರಾಜ್ಯ

ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಆರೋಪ: ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಬಂಧನ!

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಬಿಗ್ ಬಾಸ್‌ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಆರೋಪ: ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಬಂಧನ!
ಸೋನು ಶ್ರೀನಿವಾಸಗೌಡ
Published On :

ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಬಿಗ್ ಬಾಸ್‌ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸಗೌಡ ಅವರನ್ನು ಬಂಧಿಸಿರುವ ಬ್ಯಾಡರಹಳ್ಳಿ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. ಏಳು ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿಕೊಂಡು ಬಂಧಿಸಿದ್ದಾರೆ.

ನಾನು ಅವಳ ಅಮ್ಮನ ಬಳಿ ದತ್ತು ಕೊಡುವಂತೆ ಕೇಳಿದೆ. ಇದನ್ನು ಕೇಳಿ ಅವಳ ತಾಯಿ ರಾಯಚೂರಿಗೆ ಹೊರಟು ಹೋದರು. ಮಗುವಿಗೆ ನಾನಿಲ್ಲದೆ ಜ್ವರ ಬಂದಿತ್ತು. ಫೋನ್ ಮೂಲಕ ಸೇವಂತಿ ಬಳಿ ಮಾತನಾಡಿದೆ. ನಂತರ ಅವಳನ್ನು ಕರೆದುಕೊಂಡು ಬಂದೆ. ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳಲು 3 ತಿಂಗಳು ಬೇಕು. ಅವಳ ಅಪ್ಪ ಅಮ್ಮನಿಗೆ ಒಪ್ಪಿಗೆ ಇದೆ. ನನಗೂ ಒಪ್ಪಿಗೆ ಇದೆ. ಕಾನೂನು ಕ್ರಮ ನಡೆಯುತ್ತಿದೆ’ ಎಂದು ಸೋನು ಹೇಳಿದ್ದರು.

ನಾನು ಅಪಾರ್ಟ್​ಮೆಂಟ್ ಕೆಳಗೆ ನಾಯಿಗೆ ಬಿಸ್ಕಿಟ್ ಹಾಕುವಾಗ ಇವಳು ಸಿಕ್ಕಿದ್ದಳು. ಅವಳಿಗೆ ಚಾಕೋಲೇಟ್ ಕೊಡಿಸಿದೆ. ನಂತರ ಶಾಪಿಂಗ್ ಹೋದೆವು. ಮನೆಗೆ ಕರೆದುಕೊಂಡು ಹೋಗಿ ಎಂದು ಕೇಳಿದಳು. ನಾನು ದತ್ತು ತೆಗೆದುಕೊಳ್ಳುವುದಕ್ಕೂ ಮೊದಲೇ ಅವಳಿಗೆ ಚೈನ್ ಕೊಡಿಸಿದ್ದೆ ಎಂದು ಹೇಳಿಕೊಂಡಿದ್ದರು ಸೋನು ಶ್ರೀನಿವಾಸ್ ಗೌಡ.

ನಾಲ್ಕು ದಿನ ಪೊಲೀಸ್ ಕಸ್ಟಡಿ:

ಬಾಲಕಿಯೊಬ್ಬರನ್ನು ಕಾನೂನು ಬಾಹಿರವಾಗಿ ದತ್ತು ಪಡೆದು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಹರಿಬಿಟ್ಟ ಆರೋಪದಡಿ ಬಂಧನಕ್ಕೊಳಗಾಗಿರುವ ರೀಲ್ಸ್ ಸ್ಟಾರ್ ಹಾಗೂ ಕಿರುತೆರೆ ನಟಿ ಸೋನು ಗೌಡ ಅವರನ್ನು ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಬಾಲಕಿ ದತ್ತು ಸಂಬಂಧ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಅಧಿಕಾರಿ ನೀಡಿದ್ದ ದೂರಿನ ಅನ್ವಯ ಸೋನುಗೌಡ ಅವರನ್ನು ಗುರುವಾರ ಬೆಳಗ್ಗೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೋರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.