ಕಾನೂನು ಬಾಹಿರವಾಗಿ ಮಗು ದತ್ತು ಪ್ರಕರಣ: ರೀಲ್ಸ್ ಸ್ಟಾರ್ ಸೋನು ಗೌಡ ನಾಲ್ಕು ದಿನ ಪೊಲೀಸ್ ವಶಕ್ಕೆ
ಬಿಗ್ ಬಾಸ್ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರನ್ನು ಶುಕ್ರವಾರ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಬಿಗ್ ಬಾಸ್ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರನ್ನು ಶುಕ್ರವಾರ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.
ಬ್ಯಾಡರಹಳ್ಳಿ ಪೊಲೀಸರು ಇಂದು ಸೋನು ಗೌಡ ಅವರನ್ನು ಬೆಂಗಳೂರಿನ ಸಿಜೆಎಂ ಕೋರ್ಟ್ ಗೆ ಹಾಜರುಪಡಿಸಿದರು. ಮಗು ಪೋಷಕರನ್ನು ರಾಯಚೂರಿಗೆ ಕರೆದುಕೊಂಡು ಹೋಗಿ ಮಹಜರು ಮತ್ತು ಹೇಳಿಕೆ ಪಡೆಯಬೇಕಿದೆ. ಅಪಾರ್ಟ್ ಮೆಂಟ್ ನ ಅಕ್ಕಪಕ್ಕದ ಸ್ಥಳೀಯರ ಹೇಳಿಕೆ ಪಡೆಯಬೇಕಿದೆ. ಈ ಉದ್ದೇಶ ದಿಂದ ನಾಲ್ಕು ದಿನಗಳ ಕಾಲ ತಮ್ಮ ಕಸ್ಟಡಿ ನೀಡುವಂತೆ ಪೊಲೀಸರು ಮನವಿ ಮಾಡಿದರು.
ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್, ಆರೋಪಿ ಸೋನು ಗೌಡ ಅವರನ್ನು ಮಾರ್ಚ್ 25ರ ವರೆಗೆ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.
ಈ ವರ್ಷದ ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಸೋನು ಗೌಡ ಅವರನ್ನು ಇಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಸೋನು ಗೌಡರನ್ನು ವಶಕ್ಕೆ ಪಡೆದಿದ್ದಾರೆ.
ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. 8 ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



