ರಾಜ್ಯ

ಹೃದಯ ಶಸ್ತ್ರಚಿಕಿತ್ಸೆ: ಚೆನ್ನೈ ಆಸ್ಪತ್ರೆಯಿಂದ ಕುಮಾರಸ್ವಾಮಿ ಡಿಸ್ಟಾರ್ಜ್, ಇಂದು ಬೆಂಗಳೂರಿಗೆ

ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಭಾನುವಾರ ಡಿಸ್ಟಾರ್ಜ್ ಆಗಲಿದ್ದು, ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆಂದು ತಿಳಿದುಬಂದಿದೆ.

ಹೃದಯ ಶಸ್ತ್ರಚಿಕಿತ್ಸೆ: ಚೆನ್ನೈ ಆಸ್ಪತ್ರೆಯಿಂದ ಕುಮಾರಸ್ವಾಮಿ ಡಿಸ್ಟಾರ್ಜ್, ಇಂದು ಬೆಂಗಳೂರಿಗೆ
ಎಚ್.ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಭಾನುವಾರ ಡಿಸ್ಟಾರ್ಜ್ ಆಗಲಿದ್ದು, ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆಂದು ತಿಳಿದುಬಂದಿದೆ.

ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯಾಗಿದೆ. ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್‌ ಮತ್ತು ಅಮೆರಿಕದಿಂದ ಆಗಮಿಸಿದ ವೈದ್ಯರ ತಂಡದಿಂದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಕುಮಾರಸ್ವಾಮಿಯವರನ್ನು ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರ ಮಾಡಿ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ.

ಇಂದು (ಭಾನುವಾರ) ಬೆಳಗ್ಗೆ ಡಿಸ್ಟಾರ್ಜ್ ಆಗುವ ಕುಮಾರಸ್ವಾಮಿ ಅವರು, ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ಜೆ.ಪಿ.ನಗರದ ನಿವಾಸಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿಗೆ ಆಗಮಿಸಿದ ಬಳಿಕ ಕೆಲ ದಿನ ವಿಶ್ರಾಂತಿ ಪಡೆಯುವ ಸಾಧ್ಯತೆ ಇದ್ದು, ನಂತರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಆಸ್ಪತ್ರೆಯಿಂದ ಆಗಮಿಸುತ್ತಿದ್ದಂತೆ ಜೆಡಿಎಸ್‌ಗೆ ಲಭ್ಯವಾಗಿರುವ ಮೂರು ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.