ರಾಜ್ಯ

ಅಕ್ರಮ ದತ್ತು ಪ್ರಕರಣ: 'ರೀಲ್ಸ್ ರಾಣಿ' ಸೋನು ಶ್ರೀನಿವಾಸಗೌಡಗೆ 14 ದಿನ ನ್ಯಾಯಾಂಗ ಬಂಧನ

ಬಾಲಕಿಯ ಅಕ್ರಮ ದತ್ತು ಪ್ರಕರಣದಲ್ಲಿ ನಟಿ ಸೋನು ಗೌಡ ಅವರುಗೆ ಏಪ್ರಿಲ್ 8 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಅಕ್ರಮ ದತ್ತು ಪ್ರಕರಣ: 'ರೀಲ್ಸ್ ರಾಣಿ' ಸೋನು ಶ್ರೀನಿವಾಸಗೌಡಗೆ 14 ದಿನ ನ್ಯಾಯಾಂಗ ಬಂಧನ
ಸೋನು ಶ್ರೀನಿವಾಸಗೌಡ
Published On :

ಬೆಂಗಳೂರು: ಬಾಲಕಿಯ ಅಕ್ರಮ ದತ್ತು ಪ್ರಕರಣದಲ್ಲಿ ನಟಿ ಸೋನು ಗೌಡ ಅವರುಗೆ ಏಪ್ರಿಲ್ 8 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಗುವನ್ನು ಅಕ್ರಮವಾಗಿ ಸಾಕುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಗೌಡಗೆ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಹದಿನಾಲ್ಕು ದಿನಗಳ‌ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದಿದ್ದರು ಪೊಲೀಸರು. ಇಂದು ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು.

ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿದ್ದ ಸೋನು ಶ್ರೀನಿವಾಸಗೌಡರನ್ನು ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ನಿನ್ನೆ (ಮಾ.24) ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದ ಸ್ಥಳ ಮಹಜರು ಮಾಡಿದ್ದರು.

ಅಪ್ರಾಪ್ತ ಬಾಲಕಿಯನ್ನ ಸೋನುಗೌಡ ಆಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ಮತ್ತಷ್ಟು ಬೆಳವಣಿಗೆ ಕಂಡುಬರುತ್ತಿವೆ. ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದಿದ್ದರು. ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.