ಯಾದಗಿರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು; ಮೊದಲ ದಿನವೇ ಇಬ್ಬರು ಶಿಕ್ಷಕರ ಅಮಾನತು
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಸೋಮವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಲಾಗಿದೆ.

ಯಾದಗಿರಿ: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಸೋಮವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಲಾಗಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ, ಸುರಪುರ ತಾಲೂಕಿನ ಏವೂರು ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್ಗೌಡ ಮತ್ತು ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಝಂಡದಕೇರಾ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತರಾಯ ಅವರನ್ನು ಅಮಾನತು ಮಾಡಲಾಗಿದೆ.
ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ ಆರೋಪದ ಮೇಲೆ ಈ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಗರೀಮಾ ಪನ್ವಾರ್ ಅವರು ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಮೇಲ್ವಿಚಾರಕರು ಕ್ರಮಕೈಗೊಂಡಿರಲಿಲ್ಲ. ಮುಖ್ಯ ಅಧೀಕ್ಷಕರ ಗಮನಕ್ಕೂ ತರದೆ ಪರೀಕ್ಷಾ ಮೇಲ್ವಿಚಾರಕರು ನಿರ್ಲಕ್ಷಿಸಿದ್ದಾರೆ. ಸಿಸಿಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಪರೀಕ್ಷಾ ಮೇಲ್ವಿಚಾರಕರ ಅಮಾನತು ಮಾಡಲಾಗಿದೆ. ಅಲ್ಲದೆ ಒಬ್ಬ ವಿದ್ಯಾರ್ಥಿಯನ್ನು ಸಹ ಡಿಬಾರ್ ಮಾಡಲಾಗಿದೆ.
ಯದಗಿರಿ ಜಿಲ್ಲೆಯ 59 ಪರೀಕ್ಷಾ ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆದಿದೆ. ಜಿಲ್ಲೆಯಲ್ಲಿ 44 ಸಾಮಾನ್ಯ, 9 ಸೂಕ್ಷ್ಮ ಹಾಗೂ 6 ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 59 ಪರೀಕ್ಷಾ ಕೇಂದ್ರಗಳಲ್ಲಿ 19575 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



