ರಾಜ್ಯ

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಚಿಕಿತ್ಸೆ ಫಲಿಸದೆ ವೃದ್ಧೆ ಸಾವು

ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಮಂಗನ ಕಾಯಿಲೆಯಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಚಿಕಿತ್ಸೆ ಫಲಿಸದೆ ವೃದ್ಧೆ ಸಾವು
ಸಾಂದರ್ಭಿಕ ಚಿತ್ರ
Published On :

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಮಂಗನ ಕಾಯಿಲೆಯಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬುವರಿಗೆ ಮಂಗನಕಾಯಿಲೆ ತಗುಲಿತ್ತು. ಪರೀಕ್ಷೆಯಲ್ಲಿ ದೃಢಪಟ್ಟ ನಂತರ, ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ರತ್ನ ಎಂಬುವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಮೂಲಕ ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆಗೆ ಮತ್ತೊಂದು ಬಲಿಯನ್ನು ಪಡೆದಂತೆ ಆಗಿದೆ.

ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನಕಾಯಿಲೆ ಹೆಚ್ಚುತ್ತಿದೆ. ಕೊಪ್ಪ , ಎನ್‌ಆರ್‌ ಪುರ, ಶೃಂಗೇರಿ ತಾಲೂಕಿನಲ್ಲಿ ಕಾಯಿಲೆ ಹೆಚ್ಚುತ್ತಿದೆ. ಸದ್ಯ ಆಸ್ಪತ್ರೆಯಲ್ಲಿ11 ಕೆಎಫ್‌ಡಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.