ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗುತ್ತಿದ್ದವನನ್ನು ರಕ್ಷಿಸಲು ಹೋಗಿ ಒಟ್ಟು ನಾಲ್ವರು ಜಲಸಮಾಧಿ
ಕಾವೇರಿಯಲ್ಲಿ ನದಿಯಲ್ಲಿ ಈಜಲು ಹೋಗಿದ್ದ ಯುವಕರ ಪೈಕಿ ನಾಲ್ವರು ಜಲಸಮಾಧಿಯಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ: ಕಾವೇರಿಯಲ್ಲಿ ನದಿಯಲ್ಲಿ ಈಜಲು ಹೋಗಿದ್ದ ಯುವಕರ ಪೈಕಿ ನಾಲ್ವರು ಜಲಸಮಾಧಿಯಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಮುಳುಗಿ ಮೃತಪಟ್ಟವರನ್ನು ಮೈಸೂರು ಮೂಲದ 40 ವರ್ಷದ ನಾಗೇಶ್, 17 ವರ್ಷದ ಭರತ್, 32 ವರ್ಷದ ಗುರು ಮತ್ತು 16 ವರ್ಷದ ಮಹದೇವ್ ಎಂದು ಗುರುತಿಸಲಾಗಿದೆ. ಸದ್ಯ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ.
ಮೈಸೂರಿನಿಂದ ಮಂಡ್ಯದ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ 40 ಜನರ ತಂಡ ಒಂದೇ ಬಸ್‌ನಲ್ಲಿ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ನಾಲ್ವರು ಕಾವೇರಿ ನದಿಯಲ್ಲಿ ಈಜಾಡಲು ಹೋಗಿದ್ದು, ಓರ್ವ ನೀರಿನಲ್ಲಿ ಮುಳುಗಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು ಮುಂದಾದ ಮೂವರು ನೀರಿನಲ್ಲಿ ಮುಳುಗಿ ದುರಂತ ಅಂತ್ಯ ಕಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



