ಗ್ಯಾರಂಟಿ ಯೋಜನೆ ವೈಯಕ್ತಿಕ ಘೋಷಣೆಯಲ್ಲ, ಪಕ್ಷಕ್ಕೆ ಸೇರಿದ್ದು: ಹೈಕೋರ್ಟ್'ಗೆ ಸಿಎಂ ಸಿದ್ದರಾಮಯ್ಯ
ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಲಾದ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ವೈಯಕ್ತಿಕವಾಗಿ ಘೋಷಿಸಿ ಚುನಾವಣೆಯಲ್ಲಿ ಅಕ್ರಮ ಎಸಗಿ ಜಯಗಳಿಸಿದ್ದಾರೆ ಎಂಬ ಆರೋಪ ಸಮರ್ಥನೀಯವಲ್ಲ ಎಂದು ಹೈಕೋರ್ಟ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಬೆಂಗಳೂರು: ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಲಾದ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ವೈಯಕ್ತಿಕವಾಗಿ ಘೋಷಿಸಿ ಚುನಾವಣೆಯಲ್ಲಿ ಅಕ್ರಮ ಎಸಗಿ ಜಯಗಳಿಸಿದ್ದಾರೆ ಎಂಬ ಆರೋಪ ಸಮರ್ಥನೀಯವಲ್ಲ ಎಂದು ಹೈಕೋರ್ಟ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ನಿವಾಸಿ ಕೆ ಎಂ ಶಂಕರ್ ಸಲ್ಲಿಸಿರುವ ಚುನಾವಣಾ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸಿದ್ದರಾಮಯ್ಯ ಪರ ಹಿರಿಯ ವಕೀಲ ಪ್ರೊ. ಕೆ ರವಿವರ್ಮ ಕುಮಾರ್ ವಾದ ಮಂಡಿಸಿದರು. ಅರ್ಜಿದಾರರ ಆರೋಪವನ್ನು ಗಮನಿಸಿದರೆ ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕುವ ರೀತಿಯಂತಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡಲಾಗಿದೆ. ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರದ ಹಣವನ್ನು ಬಳಸಲಾಗುತ್ತಿದೆಯೇ ಹೊರತು ಸಿದ್ದರಾಮಯ್ಯವರ ವೈಯಕ್ತಿಕ ಆದಾಯವನ್ನಲ್ಲ ಎಂದು ಪೀಠಕ್ಕೆ ಸ್ಪಷ್ಟಪಡಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ಪರ ವಕೀಲರು ಕೆಲವು ದಾಖಲೆಗಳನ್ನು ಸಲ್ಲಿಸಿದ್ದು, ಇದಕ್ಕೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಲ್ಲಿಸಿ” ಎಂದು ಪ್ರತಿವಾದಿಗಳ ಪರ ವಕೀಲರಿಗೆ 15 ದಿನಗಳ ಕಾಲಾವಕಾಶ ನೀಡಿದ ಪೀಠ ವಿಚಾರಣೆ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



