ಚುನಾವಣೆ ಕಾರಣ ನೇಮಕಾತಿ ಪ್ರಕ್ರಿಯೆಗಳ ನಿಲ್ಲಿಸಲು ಸಾಧ್ಯವಿಲ್ಲ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಚುನಾವಣೆಯ ಕಾರಣಕ್ಕಾಗಿ ನೇಮಕಾತಿ ಪ್ರಕ್ರಿಯೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಆರಂಭವಾಗಿದ್ದ ನೇಮಕಾತಿ ಪ್ರಕ್ರಿಯೆನ್ನು ಪೂರ್ಣಗೊಳಿಸಿಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರು: ಚುನಾವಣೆಯ ಕಾರಣಕ್ಕಾಗಿ ನೇಮಕಾತಿ ಪ್ರಕ್ರಿಯೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಆರಂಭವಾಗಿದ್ದ ನೇಮಕಾತಿ ಪ್ರಕ್ರಿಯೆನ್ನು ಪೂರ್ಣಗೊಳಿಸಿಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ, ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮೇಲ್ಮನವಿ ನ್ಯಾಯಾಧಿಕರಣಕ್ಕೆ ನಡೆಯುತ್ತಿದ್ದ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಪ್ರಕ್ರಿಯೆಗಳನ್ನು ಸರ್ಕಾರ ಸ್ಥಗಿತಗೊಳಿಸಿತ್ತು. ಅದನ್ನು ಪ್ರಶ್ನಿಸಿ ಕೆಲ ಪತ್ರಕರ್ತರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಹಿಂದೆ, ಫೆಬ್ರವರಿ 26ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, ರೇರಾ ಮೇಲ್ಮನವಿ ನ್ಯಾಯಮಂಡಳಿಗೆ ಅದರ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಬೇಕು ಮತ್ತು ಕ್ರಿಯಾತ್ಮಕಗೊಳಿಸಬೇಕು ಎಂದು ಹೇಳಿತ್ತು. ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿತ್ತು.
ಆ ಆದೇಶದ ಪಾಲನೆಗೆ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸಿದೆ. ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಆದೇಶಗಳನ್ನು ಜಾರಿಗೊಳಿಸಲು ಚುನಾವಣೆ ಘೋಷಣೆ ಅಡ್ಡಿಯಾಗಿದೆ ಎಂದು ಹೇಳಿದರು.
ವಾದ ಆಲಿಸಿದ ನ್ಯಾಯಪೀಠ ಚುನಾವಣೆ ಕಾರಣ ನೇಮಕಾತಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ನೇಮಕಾತಿಯನ್ನು ಪೂರ್ಣಗೊಳಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



