ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರು, ಶಿವಮೊಗ್ಗದಲ್ಲಿ ಎನ್ಐಎ ಅಧಿಕಾರಿಗಳ ದಾಳಿ
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನು ಮುಂದುವರಿಸಿರುವ ರಾಷ್ಟ್ರೀಯ ತನಿಖಾ ದಳ ಐದು ಕಡೆ ದಾಳಿ ನಡೆಸಿದೆ.

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನು ಮುಂದುವರಿಸಿರುವ ರಾಷ್ಟ್ರೀಯ ತನಿಖಾ ದಳ ಐದು ಕಡೆ ದಾಳಿ ನಡೆಸಿದೆ.
ಶಂಕಿತ ವ್ಯಕ್ತಿಗಳ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಬೆಂಗಳೂರಿನ ಇಬ್ಬರು ಶಂಕಿತರನ್ನು ಶನಿವಾರ ಸಂಜೆ ವಶಕ್ಕೆ ಪಡೆದುಕೊಂಡಿರುವ ವಿಚಾರ ಮಂಗಳವಾರ ತಿಳಿದುಬಂದಿತ್ತು.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ 5ಕ್ಕೂ ಹೆಚ್ಚು ಕಡೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿ ಸೇರಿದಂತೆ 5 ಕಡೆ ದಾಳಿ ಮಾಡಲಾಗಿದೆ. ಬೆಂಗಳೂರಿನಿಂದ 5ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಎನ್ಐಎ ತಂಡದಲ್ಲಿ 15ಕ್ಕೂ ಹೆಚ್ಚು ಅಧಿಕಾರಿಗಳಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬರ್ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದ ಬಗ್ಗೆ ಯಾವುದೇ ಮಾಹಿತಿ ಇಲ್ಲ: ತಮಿಳುನಾಡು ಪೊಲೀಸರು
ದೇ ವೇಳೆ ಚೆನ್ನೈನ ಮೂರು ಕಡೆ ಕೂಡ ಎನ್ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಶಂಕಿತರ ಶೋಧ ನಡೆಸಿದೆ. ಉಗ್ರರಿಗೆ ಹಣದ ನೆರವು, ಉಗ್ರರ ಪರ ಹಣ ಸಂಗ್ರಹ ಆರೋಪದ ಮೇಲೆ ಶಂಕಿತರ ಮನೆಗಳಲ್ಲಿ ಶೋಧ ನಡೆಸಿದೆ. ತಮಿಳುನಾಡಿನಲ್ಲಿ ನಡೆದಿರುವ ಎನ್‌ಐಎ ದಾಳಿ ಕೂಡ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ್ದೇ ಆಗಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


