ಅಕ್ರಮ ಆಸ್ತಿ ಗಳಿಕೆ ಆರೋಪ: ಸುಖ ನಿದ್ದೆಯಲ್ಲಿದ್ದವರಿಗೆ ಲೋಕಾಯುಕ್ತ ಶಾಕ್; ರಾಮನಗರ, ಬೀದರ್ ಸೇರಿದಂತೆ ಹಲವೆಡೆ ದಾಳಿ, ದಾಖಲೆ ಪರಿಶೀಲನೆ
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಉತ್ತರ ಕನ್ನಡ ಮತ್ತು ಬೀದರ್ ಮತ್ತು ರಾಮನಗರ ಜಿಲ್ಲೆಯ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಉತ್ತರ ಕನ್ನಡ ಮತ್ತು ಬೀದರ್ ಮತ್ತು ರಾಮನಗರ ಜಿಲ್ಲೆಯ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ಆರ್. ರೇವಣಕರ್ ಅವರ ಕಾರವಾರದ ಐಶ್ವರ್ಯ ರೆಸಿಡೆನ್ಸಿಯಲ್ನಲ್ಲಿರುವ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಬೀದರ್ ಜಿಲ್ಲೆಯಲ್ಲಿ ಭಾಲ್ಕಿ ಕಾರಂಜಾ ವಿಭಾಗದ ಎಲೆಕ್ಟ್ರಿಕಲ್ ಎಂಜಿನಿಯರ್ ಶಿವಕುಮಾರ್ ಸ್ವಾಮಿ ಅವರಿಗೆ ಸೇರಿದ ಬೀದರ್ ನಗರದ ಅಗ್ರಿಕಲ್ಚರ್ ಕಾಲೋನಿಯಲ್ಲಿರುವ ಮನೆ, ಕಲಬುರಗಿ ನಗರದ ಎಂ.ಬಿ. ಕಾಲೋನಿಯಲ್ಲಿರುವ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ತಾಲೂಕಿನ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ಯತೀಶ್ ಚಂದ್ರ ಅವರ ಮನೆ ಹಾಗೂ ಗ್ರಾಮ ಪಂಚಾಯತಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದಾರೆ.
ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿ ಕಚೇರಿ ಹಾಗೂ ಮೈಸೂರಿನ ನಿವಾಸದ ಮೇಲೆ ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಸುಮಾರು 5 ಕ್ಕು ಹೆಚ್ಚು ಅಧಿಕಾರಿಗಳ ತಂಡ ದಾಳಿ ಮಾಡಿದೆ.
ಗ್ರಾಮ ಪಂಚಾಯತಿ ಕಚೇರಿಯಲ್ಲಿ ಹಲವು ಕಡತಗಳನ್ನ ಪರಿಶೀಲನೆ ಮಾಡಲಾಗುತ್ತಿದೆ. ಅದೆ ರೀತಿ ಮೈಸೂರಿನ ಮನೆಯಲ್ಲು ಸಹ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



