ಮತದಾನ ಜಾಗೃತಿ ಅಭಿಯಾನ: ವಿಶೇಷ ಚೇತನರ ಬೈಕ್ ಜಾಥಾಗೆ ರಜನೀಶ್ ಗೋಯಲ್ ಚಾಲನೆ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಚೇತನರ ದ್ವಿಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ರಜನೀಶ್ ಗೋಯಲ್ ಚಾಲನೆ ನೀಡಿದ್ದಾರೆ.

ಬೆಂಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಚೇತನರ ದ್ವಿಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಚಾಲನೆ ನೀಡಿದ್ದಾರೆ.
ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶೇಷ ಚೇತನರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು.
ಲೋಕಸಭಾ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡಬೇಕು. ಈ ಬಗ್ಗೆ ಜಾಗೃತಿ ಮೂಡಿಸಲು ವಿಶೇಷ ಚೇತನರ ಮೂಲಕ ಜಾಗೃತಿ ಜಾಥಾ ಮಾಡಲಾಯಿತು. ಸಮಾಜದ ಪ್ರತಿಯೊಂದು ವರ್ಗದವರೂ ತಪ್ಪದೆ ಮತದಾನ ಮಾಡುವಂತೆ ಉತ್ತೇಜಿಸುವುದು ಈ ಪ್ರಚಾರದ ಉದ್ದೇಶವಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
ಚುನಾವಣಾ ಆಯೋಗವು ಸಮಾಜದ ಪ್ರತಿಯೊಂದು ವರ್ಗವು ಮತ ಚಲಾಯಿಸಬೇಕು ಎಂಬ ಗುರಿಯನ್ನು ಹೊಂದಿದೆ. ವಿಶೇಷಚೇತನರು, 85 ವರ್ಷ ಮೇಲ್ಪಟ್ಟವರು ಮತ್ತು ತೃತೀಯಲಿಂಗಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗುತ್ತಿದ್ದು, ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡಿದರು.
ಮತಗಟ್ಟೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮೆರವಣಿಗೆಯ ಅಂಗವಾಗಿ ವಿಧಾನಸೌಧದಲ್ಲಿ ವಿಕಲಚೇತನರಿಂದ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ರ್ಯಾಲಿ ನಡೆದು ಕೆ.ಆರ್.ವೃತ್ತ, ನೃಪತುಂಗ ರಸ್ತೆ, ಹಡ್ಸನ್ ಸರ್ಕಲ್ ಸೇರಿದಂತೆ ಕಂಠೀರವ ಕ್ರೀಡಾಂಗಣದಲ್ಲಿ ಮುಕ್ತಾಯವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



