ಬೆಂಗಳೂರಿನಲ್ಲಿ ಐದು ವರ್ಷಗಳಲ್ಲೇ ಗರಿಷ್ಠ ತಾಪಮಾನ: ಶುಕ್ರವಾರ 36.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು!
ಬೆಂಗಳೂರು ನಗರದಲ್ಲಿ ಶುಕ್ರವಾರ ಗರಿಷ್ಠ ತಾಪಮಾನ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಕಳೆದ ಐದು ವರ್ಷಗಳಲ್ಲೇ ಅತಿ ಹೆಚ್ಚಿನದಾಗಿದೆ.

ಬೆಂಗಳೂರು: ಬೆಂಗಳೂರು ನಗರದಲ್ಲಿ ಶುಕ್ರವಾರ ಗರಿಷ್ಠ ತಾಪಮಾನ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಕಳೆದ ಐದು ವರ್ಷಗಳಲ್ಲೇ ಅತಿ ಹೆಚ್ಚಿನದಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇದು ಕಳೆದ 15 ವರ್ಷಗಳಲ್ಲಿ ನಾಲ್ಕನೇ ಅತಿ ಹೆಚ್ಚು ಮತ್ತು ಕಳೆದ 10 ವರ್ಷಗಳಲ್ಲಿ ಮೂರನೇ ಅತಿ ಹೆಚ್ಚಿನದ್ದಾಗಿದೆ.
ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಾದ್ಯಂತ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ. ಕಲಬುರಗಿ ಮತ್ತು ಬಾಗಲಕೋಟದಲ್ಲಿ ಕ್ರಮವಾಗಿ 40.9 ಮತ್ತು 40.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಮಾರ್ಚ್ 29-31 ರವರೆಗೆ ಹೀಟ್ ವೇವ್ ಗಳ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಒಳನಾಡಿನಾದ್ಯಂತ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಮತ್ತು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಉಷ್ಣ ಹವೆ ಎಚ್ಚರಿಕೆ ಸಹ ನೀಡಲಾಗಿದೆ ಎಂದು ಐಎಂಡಿ ಅಧಿಕಾರಿ ತಿಳಿಸಿದ್ದಾರೆ. ಮಾರ್ಚ್ 22, 1931 ರಂದು ಬೆಂಗಳೂರಿನ ಸಾರ್ವಕಾಲಿಕ ದಾಖಲೆ 38.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



