ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಚಿಕ್ಕಮಗಳೂರಿನಲ್ಲೂ ಉಗ್ರರ ಜಾಲ ಪತ್ತೆ!
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಶಿವಮೊಗ್ಗ ಬಳಿಕ ಈಗ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಉಗ್ರರ ಜಾಲ ಇರುವುದನ್ನು ಎನ್ಐಎ ಪತ್ತೆ ಮಾಡಿದೆ.

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಶಿವಮೊಗ್ಗ ಬಳಿಕ ಈಗ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಉಗ್ರರ ಜಾಲ ಇರುವುದನ್ನು ಎನ್ಐಎ ಪತ್ತೆ ಮಾಡಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಚಿಕ್ಕಮಗಳೂರು ಕಳಸದಲ್ಲಿ ಆರೋಪಿಯೊಬ್ಬನನ್ನು ಬಂಧನಕ್ಕೊಳಪಡಿಸಿದೆ.
ಮುಝಮ್ಮಿಲ್ ಷರೀಫ್(30) ಬಂಧಿತ ಆರೋಪಿ. ಬುಧವಾರ ಮುಝಮ್ಮಿಲ್ ಶರೀಫ್ ಮನೆ ಮೇಲೆ ಎನ್‌ಐಎ ದಾಳಿ ನಡೆಸಿ, ಮೊಬೈಲ್ ಫೋನ್ ಮತ್ತು ಪ್ರಮುಖ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಗುರುವಾರ ಆರೋಪಿಯನ್ನು ಬೆಂಗಳೂರಿಗೆ ಕರೆ ತಂದ ಅಧಿಕಾರಿಗಳು, ವಿಚಾರಣೆ ನಡೆಸಿದ ಬಳಿಕ ಬಂಧನಕ್ಕೊಳಪಡಿಸಿದ್ದಾರೆ.
ಬಾಂಬ್ ಸ್ಫೋಟ ನಡೆದ ದಿನ ಆತ ಬೆಂಗಳೂರಿನಲ್ಲೇ ಇದ್ದು ಸ್ಫೋಟದ ಸಂಚುಕೋರ ಮುಸ್ಸಾವಿರ್ ಶಜೀಬ್ ಹುಸೇನ್ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಆರೋಪಿ ಮುಜಾಮಿಲ್ ಷರೀಫ್ ಈ ಸ್ಪೋಟಕ್ಕೆ ಸಂಚು ರೂಪಿಸಿ ಅದಕ್ಕೆ ಬೇಕಾದ ಸಾಮಗ್ರಿಗಳ ಸಾಗಾಟಕ್ಕೆ ನೆರವು ನೀಡಿರುವುದು ಸಹ ತನಿಖೆಯಿಂದ ಗೊತ್ತಾಗಿದೆ. ತಲೆ ಮರೆಸಿಕೊಂಡಿರುವ ಅಬ್ದುಲ್ ಮತಿನ್ ತಾಹ ಹಾಗೂ ಮುಸಾವೀರ್ ಕೆಫೆ ಸ್ಫೋಟದ ಪ್ರಮುಖ ಆರೋಪಿಗಳೆಂದು ಗೊತ್ತಾಗಿದೆ.
ಮಾ.1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿ, ಪರಾರಿಯಾಗಿರುವ ಮುಸಾವೀರ್ ಪ್ರಕರಣದ ಪ್ರಮುಖ ಆರೋಪಿ. ಇದರ ಸೂತ್ರದಾರ ಅಬ್ದುಲ್ ಮತಿನ್ ತಾಹ ಎಂದು ಎನ್ಐಎ ತನಿಖೆಯಿಂದ ತಿಳಿದು ಬಂದಿದೆ. ತಲೆ ಮರೆಸಿಕೊಂಡಿರುವ ಇವರಿಬ್ಬರ ಬಂಧನಕ್ಕೆ ಎನ್ಐಎ ದೇಶದಾದ್ಯಂತ ಶೋಧ ಮುಂದುವರೆದಿದೆ.
ಮಾಜಿ ಗೃಹ ಸಚಿವ ಅರ್ಗ ಜ್ಞಾನೇಂದ್ರ ಮಾತನಾಡಿ, ತೀರ್ಥಹಳ್ಳಿ ಮಲೆನಾಡಿನ ವಿಶಿಷ್ಟ ಸಂಸ್ಕೃತಿಗೆ ಹೆಸರುವಾಸಿಯಾಗಿದ್ದು, ಬಾಂಬರ್ ತೀರ್ಥಹಳ್ಳಿಯ ಮೂಲದವನೆಂಬುದು ನಿಜಕ್ಕೂ ಗಂಭೀರವಾದ ವಿಚಾರವಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



