ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪ್ರಕರಣ ದಾಖಲು, ಸಮನ್ಸ್ ಜಾರಿ
ಲೋಕಸಭೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ.

ಬೆಳಗಾವಿ: ಲೋಕಸಭೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ.
ಬೆಳಗಾವಿಯ ಕುವೆಂಪು ನಗರದ ತಮ್ಮ ಗೃಹ ಕಚೇರಿ ಸಮೀಪದ ಸಭಾಂಗಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಚ್ 20ರಂದು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗು ಆಶಾ ಕಾರ್ಯಕರ್ತೆಯರ ಜತೆ ಸಭೆ ನಡೆಸಿದ್ದರು. ಈ ಸಭೆಗೆ ಅನುಮತಿ ಪಡೆದಿರಲಿಲ್ಲ. ಈ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿತ್ತು.
ಅಲ್ಲದೇ ತಮ್ಮ ಪುತ್ರ ಹಾಗು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಪರ ಪ್ರಚಾರ ಮಾಡುವಂತೆಯೂ ಈ ಸಭೆಯಲ್ಲಿ ಹೆಬ್ಬಾಳ್ಕರ್ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸೂಚಿಸಿದ್ದರು ಎಂಬ ಆರೋಪವಿದೆ. ಇದರ ಬೆನ್ನಲ್ಲೇ ಹೆಬ್ಬಾಳ್ಕರ್ ಅವರಿಗೆ ಸಮನ್ಸ್ ಜಾರಿಯಾಗಿದ್ದು, ಏಪ್ರಿಲ್ 30ರೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ.
ಎರಡನೇ ಆರೋಪಿಯಾಗಿ ಸಭೆಗೆ ಅವಕಾಶ ಮಾಡಿಕೊಟ್ಟ ಸಭಾಂಗಣದ ಮಾಲೀಕ ಉಮೇಶ ಮಲ್ಲಪ್ಪ ವಾಸಣ್ಣ ಎಂಬವರಿಗೂ ಸಮನ್ಸ್ ಜಾರಿ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



