ಕರ್ನಾಟಕ ಪತ್ರಕರ್ತೆಯರ ಸಂಘದ ಪ್ರಶಸ್ತಿ ಪ್ರಕಟ
ಕರ್ನಾಟಕ ಪತ್ರಕರ್ತೆಯರ ಸಂಘ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ್ದು, ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಇಬ್ಬರು ಪತ್ರಕರ್ತೆಯರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಬ್ಬರು ಸೇರಿದಂತೆ ಮೂವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಬೆಂಗಳೂರು: ಕರ್ನಾಟಕ ಪತ್ರಕರ್ತೆಯರ ಸಂಘ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ್ದು, ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಇಬ್ಬರು ಪತ್ರಕರ್ತೆಯರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಬ್ಬರು ಸೇರಿದಂತೆ ಮೂವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.
ದೂರದರ್ಶನದಲ್ಲಿ ಸೇವೆ ಸಲ್ಲಿಸಿರುವ ಹಿರಿಯ ಪತ್ರಕರ್ತೆ ಗಾಯತ್ರಿ ಚಂದ್ರಶೇಖರ್ ಹಾಗೂ ಕಿರಿಯ ಪತ್ರಕರ್ತೆ ಅನಿತಾ (ಉಪಸಂಪಾದಕಿ, ಪ್ರಜಾವಾಣಿ- ದಾವಣಗೆರೆ ಆವೃತ್ತಿ) ಅವರನ್ನು ಆಯ್ಕೆ ಮಾಡಿದೆ. ಈ ವರ್ಷದ ಮಹಿಳಾ ಸಾಧಕರು, ವಾರ್ಷಿಕ ಪ್ರಶಸ್ತಿಗೆ ಇಸ್ರೋ ಚಂದ್ರಯಾನ-೩ ಡೆಪ್ಯೂಟಿ ಪ್ರಾಜೆಕ್ಟ್ ಡೈರೆಕ್ಟರ್ ಎಂ.ವಿ. ರೂಪಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕರ್ನಾಟಕ ಪತ್ರಕರ್ತೆಯರ ಸಂಘ ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ ೩ರಂದು ನಡೆಯಲಿರುವ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಸಾಮಾಜಿಕ ಕಾರ್ಯಕರ್ತೆ ಕಾತ್ಯಾಯಿನಿ ಚಾಮರಾಜ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


