ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್: ಎಸ್ಐಟಿ ತಂಡಕ್ಕೆ 18 ಅಧಿಕಾರಿ, ಸಿಬ್ಬಂದಿಗಳ ನೇಮಕ
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಪೊಲೀಸ್ ಇಲಾಖೆ ನಿಯೋಜಿಸಿ ಆದೇಶಿಸಿದೆ.

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಪೊಲೀಸ್ ಇಲಾಖೆ ನಿಯೋಜಿಸಿ ಆದೇಶಿಸಿದೆ.
ಪ್ರಕರಣದ ಕೂಲಂಕಷ ತನಿಖೆಗಾಗಿ ರಾಜ್ಯ ಸರ್ಕಾರವು ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಮೈಸೂರು ಎಸ್ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್ಪಿ ಸುಮನ್ ಪನ್ನೇಕರ್ ಅವರನ್ನ ನಿಯೋಜಿಸಿತ್ತು. ಇದೀಗ ರಾಜ್ಯ ಸರ್ಕಾರ 18 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿಯನ್ನ ನಿಯೋಜಿಸಿದೆ. ಇದರಿಂದ ಎಸ್ಐಟಿ ತನಿಖೆ ಇನ್ನಷ್ಟು ಚುರುಕುಗೊಳ್ಳಲಿದೆ.
ಪ್ರಕರಣ ಸಂಬಂಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸರನ್ನೂ ಒಳಗೊಂಡಂತೆ 18 ಮಂದಿ ಪರಿಣಿತರನ್ನ ನಿಯೋಜಿಸಲಾಗಿದೆ,
ಪೊಲೀಸ್ ಮಹಾ ನಿರ್ದೇಶಕರ ಸೂಚನೆಯಂತೆ ಬೆಂಗಳೂರು ನಗರದ ಮಾರತ್ ಹಳ್ಳಿ ಉಪ ವಿಭಾಗದ ಎಸಿಪಿ ಪ್ರಿಯದರ್ಶಿನಿ ಈಶ್ವರ್ ಸಾನಿಕೊಪ್ಪ, ಬೆಂಗಳೂರು ನಗರ ಸಿಸಿಬಿ ಎಸಿಪಿ ಸತ್ಯನಾರಾಯಣ ಸಿಂಗ್ ಎಸ್.ಬಿ., ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್, ಮಂಗಳೂರು ಉರ್ವಾ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಭಾರತಿ ಜಿ., ಕೆ.ಆರ್. ಪೇಟೆ ಟೌನ್ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಸುಮರಾಣಿ ಬಿ.ಎಸ್., ಆಲನಹಳ್ಳಿ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಸ್ವರ್ಣಾ ಜಿ.ಎಸ್., ವೈಟ್ ಫೀಲ್ಡ್ ನ ಸೆನ್ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಹೇಮಂತ್ ಕುಮಾರ್ ಎಂ., ಬೆಂಗಳೂರು ನಗರ ಸಿಸಿಬಿ ಪೊಲೀಸ್ ಇನ್ ಸ್ಪೆಕ್ಟರ್ ರಾಜಾ ಜಿ.ಸಿ., ಉಡುಪಿ ಮಲ್ಪೆ ಸಿಎಸ್ಪಿ ಪಿಎಸ್ಸೈ ವೈಲೆಟ್ ಫ್ಲೆಮೀನಾ ಸೇರಿದಂತೆ 18 ಮಂದಿಯನ್ನು ಓಓಡಿ ಆಧಾರದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜಿಸಿ ಆದೇಶ ಹೊರಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



