ರಾಜ್ಯ

Prajwal Revanna ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ, ಸುದ್ದಿಗೆ ಗ್ರಾಸವಾದ ಕಾಂಗ್ರೆಸ್ ಶಾಸಕರ ವಾಟ್ಸಪ್ ಕಾಲ್!

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರ ವಾಟ್ಸಪ್ ಕಾಲ್ ವೊಂದರ ಕುರಿತು ಭಾರಿ ಚರ್ಚೆಯಾಗುತ್ತಿದೆ.

Prajwal Revanna ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ, ಸುದ್ದಿಗೆ ಗ್ರಾಸವಾದ ಕಾಂಗ್ರೆಸ್ ಶಾಸಕರ ವಾಟ್ಸಪ್ ಕಾಲ್!
ವಾಟ್ಸಪ್ ಕಾಲ್
Published On :

ರಾಮನಗರ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರ ವಾಟ್ಸಪ್ ಕಾಲ್ ವೊಂದರ ಕುರಿತು ಭಾರಿ ಚರ್ಚೆಯಾಗುತ್ತಿದೆ.

ಹೌದು.. ರಾಮನಗರ ಕಾಂಗ್ರೆಸ್ ಶಾಸಕ ಎಚ್‌.ಎ.ಇಕ್ಬಾಲ್ ಹುಸೇನ್ ಅವರು ಮಹಿಳೆಯೊಬ್ಬರ ಜತೆಗಿನ ವಾಟ್ಸ್‌ಆ್ಯಪ್‌ ಕಾಲ್‌ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಯೂ ಆಗಿರುವ ಮಹಿಳೆ ಜತೆ ಹುಸೇನ್ ಅವರು, ಆಪ್ತವಾಗಿ ಮಾತನಾಡುತ್ತಿರುವ 2 ನಿಮಿಷ 27 ಸೆಕೆಂಡ್‌ನ ವಿಡಿಯೊ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪದ ಪ್ರಕರಣ ದೊಡ್ಡ ಸುದ್ದಿಯಾಗಿರುವ ಬೆನ್ನಲ್ಲೇ ಶಾಸಕ ಹುಸೇನ್ ವಿಡಿಯೊ ಬಹಿರಂಗವಾಗಿದ್ದು, ಇದರೊಂದಿಗೆ ಜಿಲ್ಲೆಯ ವಿವಿಧ ರಾಜಕಾರಣಿಗಳ ಜತೆ ಮಹಿಳೆ ಕಾಣಿಸಿಕೊಂಡಿರುವ ಫೋಟೊಗಳು ಕೂಡ ಮೊಬೈಲ್‌ಗಳಲ್ಲಿ ಹರಿದಾಡುತ್ತಿವೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಶಾಸಕ ಇಕ್ಬಾಲ್ ಹುಸೇನ್, ‘ನಾನೇ ಮಾತನಾಡಿರುವ ವಿಡಿಯೊ ಇರಬಹುದು. ನಾನು ಗೆದ್ದಿರುವುದಕ್ಕೆ ಎದುರಾಳಿಗಳು ಈ ರೀತಿಯ ವಿಡಿಯೊ ಹರಿಬಿಟ್ಟಿದ್ದಾರೆ. ಇಂತಹವೆಲ್ಲಾ ಬರುತ್ತಿರುತ್ತವೆ. ಅದರಲ್ಲಿರುವ ಸತ್ಯಾಂಶವೇನು ಎಂದು ನೋಡುವೆ. ಪೊಲೀಸ್ ದೂರು ಸೇರಿದಂತೆ ಕಾನೂನು ಕ್ರಮ ಕುರಿತು ಇನ್ನೂ ನಿರ್ಧರಿಸಿಲ್ಲ’ ಎಂದರು.

ಇಕ್ಬಾಲ್ ಬೆನ್ನಿಗೆ ನಿಂತ ಕೆಎನ್ ರಾಜಣ್ಣ

ಇನ್ನು ಇಕ್ಬಾಲ್ ಹುಸೇನ್ ಕುರಿತ ವಿಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆಎನ್ ರಾಜಣ್ಣ, 'ಇಕ್ಬಾಲ್ ಹುಸೇನ್ ಸಂಭಾವಿತ ವ್ಯಕ್ತಿ. ಅಂತಹವರ ಬಗ್ಗೆ ಈ ರೀತಿ ಆರೋಪಗಳು ಸರಿಯಲ್ಲ.. ಹಾಗೇನಾದರೂ ಇದ್ದರೆ ಈ ಬಗ್ಗೆ ಪರಿಶೀಲಿಸಲಾಗುತ್ತದೆ' ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.