ರಾಜ್ಯ

ಬಿಸಿಲ ಬೇಗೆಯಲ್ಲಿ 'ಬೆಂದ'ಕಾಳೂರು: 41 ಡಿಗ್ರಿ ತಲುಪಿದ ತಾಪಮಾನ. ಮುಂದಿನ ದಿನಗಳು ಇನ್ನಷ್ಟು ಭೀಕರ...!

ಪ್ರಸಕ್ತ ವರ್ಷ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲಿಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಉರಿ ಬಿಸಿಲು, ಬಿಸಿ ಗಾಳಿ ಸೇರಿದಂತೆ ಹಲವು ಸವಾಲುಗಳು ಎದುರಾಗುತ್ತಿದೆ. ಇದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಈಗಾಲೇ ಆರೋಗ್ಯ ಇಲಾಖೆ ಉರಿ ಬಿಸಿಲಿನಲ್ಲಿ ಪ್ರಯಾಣ, ಕೆಲಸಗಳಿಂದ ದೂರವಿರುವಂತೆ ಸೂಚನೆ ನೀಡಿದೆ.

ಬಿಸಿಲ ಬೇಗೆಯಲ್ಲಿ 'ಬೆಂದ'ಕಾಳೂರು: 41 ಡಿಗ್ರಿ ತಲುಪಿದ ತಾಪಮಾನ. ಮುಂದಿನ ದಿನಗಳು ಇನ್ನಷ್ಟು ಭೀಕರ...!
ಬೇಸಿಗೆ ಕರ್ನಾಟಕ
Published On :

ಬೆಂಗಳೂರು; ಪ್ರಸಕ್ತ ವರ್ಷ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲಿಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಉರಿ ಬಿಸಿಲು, ಬಿಸಿ ಗಾಳಿ ಸೇರಿದಂತೆ ಹಲವು ಸವಾಲುಗಳು ಎದುರಾಗುತ್ತಿದೆ. ಇದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಈಗಾಲೇ ಆರೋಗ್ಯ ಇಲಾಖೆ ಉರಿ ಬಿಸಿಲಿನಲ್ಲಿ ಪ್ರಯಾಣ, ಕೆಲಸಗಳಿಂದ ದೂರವಿರುವಂತೆ ಸೂಚನೆ ನೀಡಿದೆ.

ಈ ಬೆಳವಣಿಗೆ ನಡುವೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಈ ವರ್ಷದ ಗರಿಷ್ಠ 41.8 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಇದು ಬೆಂಗಳೂರು ಇತಿಹಾಸದಲ್ಲಿ ದಾಖಲಾಗಿರುವ 3ನೇ ಗರಿಷ್ಠ ತಾಪಮಾನವಾಗಿದೆ.

ಕೆಂಗೇರಿಯಲ್ಲಿ ಮಂಗಳವಾರ ಗರಿಷ್ಠ ತಾಪಮಾನ 41.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ದಿನ ಬೆಂಗಳೂರಿನ ಬಿದರಹಳ್ಳಿಯಲ್ಲಿ 41.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ನೀಡಿದೆ,

ಬೆಂಗಳೂರಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿರುವ ಸಾಧ್ಯತೆ ಇದೆ. ತಾಪಮಾನ ಏರಿಕೆಯಲ್ಲಿ ಆಯಾ ಸ್ಥಳಗಳಲ್ಲಿ ಸ್ಥಳೀಯ ಅಂಶಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ) ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 5 ರವರೆಗೆ ಬಿಸಿಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಐಎಂಡಿ ಪ್ರಕಾರ, ಬೆಂಗಳೂರು ಸಿಟಿ ವೀಕ್ಷಣಾಲಯದಲ್ಲಿ ಮಂಗಳವಾರ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ಮತ್ತು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಲಬುರಗಿಯಲ್ಲಿ ಗರಿಷ್ಠ 42.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ನಗರದ ಹೆಚ್ಎಎಲ್ ನಲ್ಲಿ ಮಂಗಳವಾರ 37.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಕಲಬುರಗಿಯಲ್ಲಿ ಗರಿಷ್ಠ 42.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಮಧ್ಯಾಹ್ನ 3 ಗಂಟೆಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ 40 ಡಿಗ್ರಿ ಸೆಲ್ಸಿಯಸ್, ಹೆಸರಘಟ್ಟ 40.1 ಡಿಗ್ರಿ ಸೆಲ್ಸಿಯಸ್, ಲಾಲ್ ಬಾಗ್ 40.5 ಡಿಗ್ರಿ ಸೆಲ್ಸಿಯಸ್, ಯಲಹಂಕದಲ್ಲಿ 40.8 ಡಿಗ್ರಿ ಸೆಲ್ಸಿಯಸ್ (ಮಧ್ಯಾಹ್ನ 3.30), ತಾವರೆಕೆರೆ 40.3 ಡಿಗ್ರಿ ಸೆಲ್ಸಿಯಸ್ ಮತ್ತು ಉತ್ತರಹಳ್ಳಿಯಲ್ಲಿ 40.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೇವಲ ಬೆಳಗಿನ ಸಮಯದಲ್ಲಿ ಅಷ್ಟೇ ಅಲ್ಲದೆ, ನಗರದಲ್ಲಿ ರಾತ್ರಿ ವೇಳೆಯಲ್ಲೂ ತಾಪಮಾನ ಏರಿಕೆಯಾಗುತ್ತಿರುವುದು ಕಂಡು ಬರುತ್ತಿದೆ.

ಏಪ್ರಿಲ್ 29 ರಂದು ಕೆಲವು ಸ್ಥಳಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಕೆಎಸ್‌ಎನ್‌ಡಿಎಂಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅದೇ ದಿನ ಬಿದ್ದರಹಳ್ಳಿ ಮತ್ತು ಹೆಸ್ಸರಘಟ್ಟದಲ್ಲಿ ಕ್ರಮವಾಗಿ 40.2 ಮತ್ತು 40.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಎಂದು ಹೇಳಿದ್ದಾರೆ.

ಕೇವಲ ಹಗಲಿನ ತಾಪಮಾನದಲ್ಲಷ್ಟೇ ಅಲ್ಲ, ಕನಿಷ್ಠ ತಾಪಮಾನವೂ ಏರಿಕೆಯಾಗುತ್ತಿದೆ. ರಾತ್ರಿ ವೇಳೆಯಲ್ಲೂ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಏಪ್ರಿಲ್‌ನಲ್ಲಿ ಮಳೆಯಾಗದಿರುವುದು ಅಪರೂಪದ ವಿದ್ಯಮಾನವಾಗಿದೆ. ಸಾಮಾನ್ಯವಾಗಿ ಕನಿಷ್ಟ ತಾಪಮಾನವು 22 ಮತ್ತು 33 ರ ನಡುವೆ ಇರುತ್ತದೆ. ಆದರೆ, ಬೆಂಗಳೂರಿನಲ್ಲಿ ಕನಿಷ್ಟ ತಾಪಮಾನದಲ್ಲೂ ಏರಿಕೆಯಾಗಿರುವುದು ಆತಂಕದ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.

ಈ ನಡವೆ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮೇ 5 ಮತ್ತು 6 ರಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ನಗರದಲ್ಲಿ ಉಷ್ಣಾಂಶ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದರೂ, ಕಟ್ಟಣ ನಿರ್ಮಾಣ ಸ್ಥಳದಲ್ಲಿ ಕೂಲಿ ಕಾರ್ಮಿಕರು ಯಾವುದೇ ರಕ್ಷಣೆ ಇಲ್ಲದೆ ಕೆಲಸವನ್ನು ಮುಂದುವರೆಸುತ್ತಿರುವುದು ಕಂಡು ಬರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.