ರಾಜ್ಯ

Prajwal Revanna Sex Scandal: 'ವಿಚಾರಣೆಗೆ ಹಾಜರಾಗಲು ಸಮಯ ಬೇಕು'; ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ!

ಇಡೀ ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿರುವ ಸೆಕ್ಸ್ ಹಗರಣಕ್ಕೆ ಸಂಬಂಧಿದಂತೆ ಇದೇ ಮೊದಲ ಬಾರಿದೆ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದು, ವಿಚಾರಣೆಗೆ ಹಾಜರಾಗಲು ಸಮಯ ಬೇಕು ಎಂದಿದ್ದಾರೆ.

Prajwal Revanna Sex Scandal:  'ವಿಚಾರಣೆಗೆ ಹಾಜರಾಗಲು ಸಮಯ ಬೇಕು'; ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ!
ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ
Published On :

ಬೆಂಗಳೂರು: ಇಡೀ ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿರುವ ಸೆಕ್ಸ್ ಹಗರಣಕ್ಕೆ ಸಂಬಂಧಿದಂತೆ ಇದೇ ಮೊದಲ ಬಾರಿದೆ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದು, ವಿಚಾರಣೆಗೆ ಹಾಜರಾಗಲು ಸಮಯ ಬೇಕು ಎಂದಿದ್ದಾರೆ.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜುನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಗಳಾದ ಎಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣಗೆ ಈಗಾಗಲೇ ಎಸ್​ಐಟಿ ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಆದರೆ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದು, ಪ್ರಕರಣದ ಎ1 ಆರೋಪಿ ಎಚ್ ಡಿ ರೇವಣ್ಣ ನಾಳೆ ಅಂದರೆ ಮೇ 2ರಂದು ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ ಪ್ರಕರಣದ 2ನೇ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ದಿಢೀರ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರತ್ಯಕ್ಷರಾಗಿದ್ದು, ಎಸ್​ಐಟಿ ನೋಟಿಸ್​ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. 'ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಆದ ಕಾರಣ ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ" ಎಂದು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.