ಪ್ರಜ್ವಲ್ ವಿರುದ್ಧ ಸ್ವಯಂ ಪ್ರೇರಿತವಾಗಿ ಪೋಕ್ಸೋ ಪ್ರಕರಣ ದಾಖಲಿಸಿ’: ಸರ್ಕಾರಕ್ಕೆ ವಕೀಲ ಎಂ.ಸಿ.ನರಹರಿ ಆಗ್ರಹ
ಹಲವು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿಸುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಸ್ವಯಂ ಪ್ರೇರಿತವಾಗಿ ಪೋಕ್ಸೊ ಪ್ರಕರಣ ದಾಖಲಿಸಬೇಕು ಎಂದು ಹಿರಿಯ ವಕೀಲ ಡಾ.ಎಂ.ಸಿ.ನರಹರಿ ಅವರು ಬುಧವಾರ ಆಗ್ರಹಿಸಿದ್ದಾರೆ.

ಚಿತ್ರದುರ್ಗ: ಹಲವು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿಸುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಸ್ವಯಂ ಪ್ರೇರಿತವಾಗಿ ಪೋಕ್ಸೊ ಪ್ರಕರಣ ದಾಖಲಿಸಬೇಕು ಎಂದು ಹಿರಿಯ ವಕೀಲ ಡಾ.ಎಂ.ಸಿ.ನರಹರಿ ಅವರು ಬುಧವಾರ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತನಿಖೆ ವಿಳಂಬವಾದರೆ ತನಿಖೆ ಹಳಿತಪ್ಪಬಹುದು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸರ್ಕಾರ ಕೂಡಲೇ ಸ್ವಯಂ ಪ್ರೇರಿತವಾಗಿ ಪೋಕ್ಸೊ ಪ್ರಕರಣ ದಾಖಲಿಸಬೇಕು ಎದು ಒತ್ತಾಯಿಸಿದರು.
ಪ್ರಜ್ವಲ್ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ತನಿಖೆ ವಿಳಂಬವಾದರೆ ತನಿಖೆ ಹಳಿತಪ್ಪುವ ಸಾಧ್ಯತೆಗಳಿವೆ. ಹೀಗಾಗಿ ಎಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರನ್ನು ಶೀಘ್ರ ಬಂಧಿಸಿ, ತನಿಖೆಗೊಳಪಡಿಸಬೇಕು. ಇದೇ ರೀತಿಯ ಅಪರಾಧವನ್ನು ಸಾಮಾನ್ಯ ವ್ಯಕ್ತಿ ಮಾಡಿದ್ದರೆ, ಎಸ್ಐಟಿ ಮುಕ್ತವಾಗಿ ತಿರುಗಾಡಲು ಅವಕಾಶ ನೀಡುತ್ತಿತ್ತೇ ಎಂದು ಪ್ರಶ್ನಿಸಿದರು.
ಇದೇ ವೇಳೆ ಪ್ರಜ್ವಲ್ ಅವರನ್ನು ದೇಶದ ಅತ್ಯಂತ ಕೆಟ್ಟ ಸಂಸದರಲ್ಲಿ ಒಬ್ಬರು ಎಂದು ಬಣ್ಣಿಸಿದ ಅವರು, ಇಲ್ಲಿಯವರೆಗೆ ಎಲ್ಲಾ ವಿಷಯಗಳ ಬಗ್ಗೆ ಗಲಾಟೆ ಮಾಡುತ್ತಿದ್ದ ಜೆಡಿಎಸ್ ಮಿತ್ರ ಪಕ್ಷ ಬಿಜೆಪಿಯು ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂಪೂರ್ಣವಾಗಿ ಮೌನ ತಾಳಿದೆ. ಬಿಜೆಪಿ ನಾಯಕರು ಈ ಬಗ್ಗೆ ಕಳವಳ ವ್ಯಕ್ತಪಡಿಸಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



