ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹಗರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಬಿ.ಎನ್. ಜಗದೀಶ್ ನೇಮಕ
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ.
ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಎಚ್ ಡಿ ರೇವಣ್ಣ ವಿರುದ್ಧ ಹೊಳೆನರಸೀಪುರದ ಟೌನ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಪಣ ದಾಖಲಾಗಿದೆ.
ಇದರಂತೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಲು ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರಾಗಿರುವ ಬಿ ಎನ್ ಜಗದೀಶ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಮುಂದಿನ ಆದೇಶದವರೆಗೆ ನೇಮಕ ಮಾಡಿ ಮಂಗಳವಾರ ಆದೇಶಿಸಲಾಗಿದೆ.
ದಂಡ ಪ್ರಕ್ರಿಯಾ ಸಂಹಿತೆ 1975ರ ಸೆಕ್ಷನ್ 24ರ ಉಪ ಸೆಕ್ಷನ್ 8ರ ಅಡಿಯಲ್ಲಿ ಜಗದೀಶ್ ಅವರ ನೇಮಕ ಮಾಡಲಾಗಿದೆ.
ಸಂತ್ರಸ್ತ ಮಹಿಳೆ ನೀಡಿದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಮಾಜಿ ಸಚಿವ ಎಚ್ ಡಿ ರೇವಣ್ಣ ವಿರುದ್ಧ ಏಪ್ರಿಲ್ 28ರಂದು ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 354(ಎ), 354(ಡಿ), 506, 509 ಅಡಿ ಎಫ್‌ಐಆರ್ ದಾಖಲಾಗಿದೆ. ಇದರ ತನಿಖೆಯನ್ನು ಹಿರಿಯ ಐಪಿಎಸ್ ಅಧಿಕಾರಿ ಬಿ ಕೆ ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡ ಆರಂಭಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


