ಹೊನ್ನಾವರ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರ ದುರ್ಮರಣ, 50 ಜನರಿಗೆ ಗಾಯ
ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ.

ಉತ್ತರ ಕನ್ನಡ: ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ತುಮಕೂರು ಮೂಲದ 26 ವರ್ಷದ ಲೋಕೇಶ್ ಮತ್ತು ಚಿಕ್ಕಬಳ್ಳಾಪುರದ 38 ವರ್ಷದ ರುದ್ರೇಶ್ ಎಂದು ಗುರುತಿಸಲಾಗಿದೆ. ಇನ್ನುಳಿದಂತೆ 49 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಹಾಗೂ ಹೊನ್ನಾವರ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಖಾಸಗಿ ಬಸ್ ನಲ್ಲಿ 53 ಮಂದಿ ತಂಡ ಗೌರಿ ಬಿದನೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಾಲಕನ ಅತೀ ವೇಗದ ಕಾರಣ ಬಸ್ ಸುಳೆಮುರ್ಕಿ ತಿರುವಿನಲ್ಲಿ ಪಲ್ಟಿಯಾಗಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



