ರಾಜ್ಯ

ಬೆಂಗಳೂರು: ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ‌ ಕುಸಿದು ಕಲಾವಿದ ಸಾವು!

ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ ಕುಸಿದು ಕಲಾವಿದರೊಬ್ಬರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.

ಬೆಂಗಳೂರು: ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ‌ ಕುಸಿದು ಕಲಾವಿದ ಸಾವು!
ಮೃತ ಕಲಾವಿದ ಮುನಿಕೆಂಪಣ್ಣ
Published On :

ಬೆಂಗಳೂರು: ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ ಕುಸಿದು ಕಲಾವಿದರೊಬ್ಬರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.

ದೇವನಹಳ್ಳಿ ತಾಲೂಕು ಅರದೇಶಹಳ್ಳಿಯ ನಿವಾಸಿಯಾದ ಎನ್. ಮುನಿಕೆಂಪಣ್ಣ ಮೃತ ಕಲಾವಿದ. ಶುಕ್ರವಾರ ರಾತ್ರಿ ಯಲಹಂಕ ತಾಲೂಕಿನ ಸಾತನೂರು ಬಳಿ ಕುರುಕ್ಷೇತ್ರ ನಾಟಕ ಪ್ರದರ್ಶನ ನಡೆಯುತ್ತಿತ್ತು. ಈ ವೇಳೆ, ನಾಟಕದಲ್ಲಿ ಶಕುನಿಯ ಪಾತ್ರ ನಿರ್ವಹಿಸುತ್ತಿದ್ದ ಮುನಿಕೆಂಪಣ್ಣ ರಾತ್ರಿ 1.30ರ ಸುಮಾರಿಗೆ ಪಾತ್ರದಲ್ಲಿ ಅಭಿನಯಿಸುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಾವಿಗೂ ಮುನ್ನ ಮುನಿಕೆಂಪಣ್ಣ ಅವರು ವೇದಿಕೆಯಲ್ಲಿ ಡೈಲಾಗ್ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮೃತ ಮುನಿಕೆಂಪಣ್ಣ ಅವರು ನಿವೃತ್ತ ಉಪನ್ಯಾಸಕರು, ಸಾಹಿತಿ, ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ದೇವನಹಳ್ಳಿಯ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಇಂದು ಮಧ್ಯಾಹ್ನ ಮೂರು ಗಂಟೆಗೆ ಮುನಿಕೆಂಪಣ್ಣ ಅವರ ಹುಟ್ಟೂರಾದ ಅರದೇಶಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.