ರಾಜ್ಯ

Foxconn ಕಂಪನಿಗೆ 300 ಎಕರೆ ಭೂಮಿ: ಪರಿಹಾರದ ಮೊತ್ತ ನ್ಯಾಯಾಲಯದಲ್ಲಿ ಠೇವಣಿ- KIADB

ಫಾಕ್ಸ್‌ಕಾನ್‌ ಕಂಪನಿಗೆ ವಿತರಿಸಲು ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಳ್ಳುತ್ತಿರುವ 300 ಎಕರೆ ಜಮೀನಿನ ಪರಿಹಾರದ ಮೊತ್ತವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಶುಕ್ರವಾರ ಹೇಳಿದೆ.

Foxconn ಕಂಪನಿಗೆ 300 ಎಕರೆ ಭೂಮಿ: ಪರಿಹಾರದ ಮೊತ್ತ ನ್ಯಾಯಾಲಯದಲ್ಲಿ ಠೇವಣಿ- KIADB
ಸಂಗ್ರಹ ಚಿತ್ರ
Published On :

ಬೆಂಗಳೂರು: ಫಾಕ್ಸ್‌ಕಾನ್‌ ಕಂಪನಿಗೆ ವಿತರಿಸಲು ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಳ್ಳುತ್ತಿರುವ 300 ಎಕರೆ ಜಮೀನಿನ ಪರಿಹಾರದ ಮೊತ್ತವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಶುಕ್ರವಾರ ಹೇಳಿದೆ.

ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಅವರು, ಈ ಗ್ರಾಮಗಳಲ್ಲಿ ರೈತರಿಗೆ ನೇರವಾಗಿ ಪರಿಹಾರ ವಿತರಿಸದಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಕಾರಣದಿಂದ ಪರಿಹಾರದ ಮೊತ್ತವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಹೇಳಿದ್ದಾರೆ.

ಕುಂದಾಣ ಹೋಬಳಿಯ ಅರವನಹಳ್ಳಿ, ದೊಡ್ಡಗೊಲ್ಲಹಳ್ಳಿ, ಚಪ್ಪರದಹಳ್ಳಿ ಮತ್ತು ಬೈರದೇನಹಳ್ಳಿ ಗ್ರಾಮಗಳಲ್ಲಿ ಒಟ್ಟು 867.37 ಎಕರೆ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಅದರಲ್ಲಿ 300 ಎಕರೆಯನ್ನು ಫಾಕ್ಸ್‌ಕಾನ್‌ ಕಂಪನಿಗೆ ಹಂಚಿಕೆ ಮಾಡಲಾಗಿದೆ.

ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಜಮೀನುಗಳಿಗೆ ಬೇಲಿ ನಿರ್ಮಿಸಲು ತೆರಳಿದ್ದಾಗ ರೈತರು ಅಡ್ಡಿಪಡಿಸಿದ್ದಾರೆ. ಪೊಲೀಸ್‌ ಭದ್ರತೆಯಲ್ಲಿ ಈ ಜಮೀನುಗಳಿಗೆ ಬೇಲಿ ಹಾಕಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.