ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿದ ಮುಸ್ಲಿಂ ಯುವಕನ ಬಂಧನ
ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ, ಆಕೆಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಶುಕ್ರವಾರ ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ, ಆಕೆಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಶುಕ್ರವಾರ ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಪ್ರಕರಣದ ಸಂತ್ರಸ್ತೆ ದಲಿತ ಸಮುದಾಯಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸದ್ಧಾಂ ತನ್ನ ಮಗಳಿಗೆ ಪರಿಚಿತನಾಗಿದ್ದು, ಆತನನ್ನು ಪ್ರೀತಿಸುತ್ತಿದ್ದಳು ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಧಾಂ ತನ್ನ ಮಗಳಿಗೆ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿ ಗರ್ಭಿಣಿಯಾಗಿಸಿದ್ದಾನೆ ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಬಗ್ಗೆ ಆಸ್ಪತ್ರೆಯಿಂದ ಎಂಎಲ್‌ಸಿ (ಮೆಡಿಕೊ ಲೀಗಲ್ ಕೇಸ್) ಸ್ವೀಕರಿಸಿದ್ದೇವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ್ ತಿಳಿಸಿದ್ದಾರೆ.
ಹಾಗಾಗಿ ತಕ್ಷಣವೇ ಪೋಕ್ಸೋ ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಕೂಡಲೇ ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



