ರಾಜ್ಯ

Tiger tranqualised: ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಹುಲಿ ಕೊನೆಗೂ ಸೆರೆ

ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ಭಾಗದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿ ಮಾಡಿದ್ದ ಹುಲಿಯನ್ನು ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ಹಿಡಿಯುವಲ್ಲಿ ಕೊನೆಗೂ ಸಫಲರಾಗಿದ್ದಾರೆ.

Tiger tranqualised: ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಹುಲಿ ಕೊನೆಗೂ ಸೆರೆ
ಹುಲಿ ಸೆರೆ
Published On :

ಮೈಸೂರು: ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ಭಾಗದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿ ಮಾಡಿದ್ದ ಹುಲಿಯನ್ನು ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ಹಿಡಿಯುವಲ್ಲಿ ಕೊನೆಗೂ ಸಫಲರಾಗಿದ್ದಾರೆ.

ಹೌದು.. ಎಚ್.ಡಿ.ಕೋಟೆ ತಾಲ್ಲೂಕಿನ ಮಳಲಿ ಗ್ರಾಮದ ಕಬಿನಿ ಹಿನ್ನೀರಿನ ಸಮೀಪದ ಡಿಸ್ಕವರಿ ವಿಲೇಜ್ ರೆಸಾರ್ಟ್ ಪಕ್ಕ ಎಂಟು ವರ್ಷದ ಗಂಡು ಹುಲಿಯನ್ನು ಶನಿವಾರ ಸೆರೆ ಹಿಡಿಯಲಾಗಿದೆ.

ಹುಲಿಯು ಜನ ವಸತಿ ಪ್ರದೇಶದಲ್ಲಿ ಮಧ್ಯಾಹ್ನದಿಂದಲೇ ಕಾಣಿಸಿಕೊಂಡಿದ್ದರಿಂದ, ಮುಂಜಾಗ್ರತಾ ಕ್ರಮವಾಗಿ ಅರಣ್ಯಾಧಿಕಾರಿಗಳು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದರು. ‘ಹುಲಿಯು ಸಫಾರಿ ವಲಯದಲ್ಲೂ ಕಾಣಿಸಿಕೊಳ್ಳುತ್ತಿತ್ತು’ ಎಂದು ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

ಸೆರೆಯಾದ ಹುಲಿಯನ್ನು ಬಳಿಕ ಕಾಡಿನೊಳಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.