ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜೂನ್'ನಿಂದ ಅರ್ಜಿ ಆಹ್ವಾನಕ್ಕೆ ಸರ್ಕಾರ ನಿರ್ಧಾರ?
ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ ವಿತರಣೆಗೆ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.

ಬೆಂಗಳೂರು: ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ ವಿತರಣೆಗೆ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.
ಜೂನ್ ತಿಂಗಳಲ್ಲಿ ಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಹೊಸ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಕೆಯ ವೆಬ್ ಪೋರ್ಟಲ್ ಅನ್ನು ಸುಮಾರು ಒಂದೂವರೆ ವರ್ಷದಿಂದಲೂ ಸ್ಥಗಿತಗೊಳಿಸಲಾಗಿತ್ತು. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಜೂನ್ ಮೊದಲ ವಾರದಲ್ಲಿ ವೆಬ್‌ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅನುವು ಮಾಡಿಕೊಡಲಾಗುವುದು ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ವರದಿಗಳು ತಿಳಿಸಿವೆ.
ಕಳೆದ ವರ್ಷ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿತ್ತು. ಅದಕ್ಕೂ ಮೊದಲು ಚುನಾವಣಾ ತಯಾರಿಗಳನ್ನು ನಡೆಸಲಾಗುತ್ತಿತ್ತು. ಜೊತೆಗೆ ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯೂ ಮುಗಿದಿತ್ತು. ಹೀಗಾಗಿ, ಸುಮಾರು ಒಂದೂವರೆ ವರ್ಷದಿಂದಲೂ ಎಪಿಎಲ್ ಕಾರ್ಡ್‌ಗೆ ಅರ್ಜಿಗಳನ್ನು ಸಲ್ಲಿಸಲು ಆನ್‌ಲೈನ್ ಪೋರ್ಟಲ್‌ನಲ್ಲಿ ಅವಕಾಶ ಕಲ್ಪಿಸಿರಲಿಲ್ಲ.
ಹೊಸದಾಗಿ ರಚನೆಯಾದ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತಿತರ ಯೋಜನೆಗಳನ್ನು ಜಾರಿಗೆ ತಂದಿತು. ಇವುಗಳ ಲಾಭ ಪಡೆಯಲು ಲಕ್ಷಾಂತರ ಜನ ಅರ್ಜಿ ಸಲ್ಲಿಸಲು ಕಾಯುತ್ತಿದ್ದರು. ಆದರೆ, ಯೋಜನೆಗೆ ಹೆಚ್ಚಿನ ಅರ್ಜಿಗಳು ಬಂದೇ ಬರುತ್ತವೆ ಎಂದು ಅರಿತ ಸರ್ಕಾರ, ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿರಲಿಲಲ. ಹೀಗಾಗಿ, ಅಂದಿನಿಂದಲೂ ಲಕ್ಷಾಂತರ ಮಂದಿ ಅರ್ಹರು ಕಾರ್ಡ್‌ಗಾಗಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ.
ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್ 4 ಕ್ಕೆ ಇದೆ. ಜೂನ್ 5ಕ್ಕೆ ಚುನಾವಣಾ ಎಲ್ಲಾ ನಿರ್ಬಂಧಗಳು ತೆರವಾಗಲಿವೆ. ಆ ಬಳಿಕ ಕರ್ನಾಟಕದಲ್ಲಿ ಪಡಿತರ ಚೀಟಿ ಹಂಚಿಕೆ ಕಾರ್ಯ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



