ಬೆಂಗಳೂರಿನಲ್ಲಿ ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ವಾತಾವರಣ ಕೂಲ್ ಕೂಲ್!
ಬಿಸಿಲಿನಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಮಳೆ ತಂಪೆರೆದಿದೆ.

ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಮಳೆ ತಂಪೆರೆದಿದೆ. ಬೆಂಗಳೂರು ಹಲವು ಕಡೆ ಸಂಜೆ 6 ಗಂಟೆ ಸುಮಾರಿಗೆ ಜೋರಾದ ಗಾಳಿ ಸಮೇತ ಆರಂಭವಾದ ಮಳೆಯಿಂದ ಕೆಲವೆಡೆ ಟ್ರಾಫಿಕ್ ಜಾಮ್ ಸಂಕಷ್ಟ ಕೂಡ ಎದುರಾಯ್ತು.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ(ಕೆಎಸ್ಎನ್ಡಿಸಿ) ಹಳದಿ ಅಲರ್ಟ್ ಘೋಷಿಸುತ್ತಿದ್ದಂತೆಯೇ ನಗರದಲ್ಲಿ ಮಳೆ ಸುರಿಯಲಾರಂಭಿಸಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ತಾಪಮಾನವು ಸಾಮಾನ್ಯ ಸ್ಥಿತಿಗೆ ಮರಳಿದ್ದು, ವಾತಾವರಣ ಕೂಲ್ ಆಗಿದೆ.
ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ ಹಾಗೂ ಆನೇಕಲ್ನಂತಹ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ ಮತ್ತು ಆಲಿಕಲ್ಲು ಮಳೆಯಾಗಿದೆ.
ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಳದಿ ಅಲರ್ಟ್ ಘೋಷಿಸಲಾಗಿದೆ.
ಏತನ್ಮಧ್ಯೆ, ನೆಟಿಜನ್ಗಳು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿರುವ ವೀಡಿಯೊಗಳನ್ನು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಲು ಪ್ರಾರಂಭಿಸಿದರು.
ಬೆಂಗಳೂರಿನ ಟಿಸಿ ಪಾಳ್ಯ, ಎಲೆಕ್ಟ್ರಾನಿಕ್ ಸಿಟಿ, ಬೊಮ್ಮಸಂದ್ರ, ಚಂದಾಪುರ, ಆನೇಕಲ್ ತಾಲೂಕಿನ ಕೆಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ.
ಏತನ್ಮಧ್ಯೆ, ನಾಳೆ ಮತದಾನ ನಡೆಯುವ ಉತ್ತರ ಕರ್ನಾಟಕದ ಭಾಗದಲ್ಲಿ ತಾಪಮಾನ ಹೆಚ್ಚುತ್ತಲೇ ಇದ್ದು, ಮತದಾನ ನಡೆಯುವ ಜಿಲ್ಲೆಗಳಲ್ಲಿ ಒಂದಾದ ರಾಯಚೂರಿನಲ್ಲಿ ಇಂದು 47 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಕಳೆದ ಏಳು ವರ್ಷಗಳಲ್ಲಿ ಮೇ 6 ರಂದು ದಾಖಲಾಗಿರುವ ಗರಿಷ್ಠ ತಾಪಮಾನ ಇದಾಗಿದೆ ಎಂದು ಕೆಎಸ್ಎನ್ಡಿಸಿ ತಿಳಿಸಿದೆ.
ಮೇ 8 ರ ನಂತರ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



