ರಾಜ್ಯ

ಮಹಿಳೆ ಅಪಹರಣ ಪ್ರಕರಣ: ರೇವಣ್ಣ ಆಪ್ತ ಸತೀಶ್ ಬಾಬಣ್ಣಗೆ 8 ದಿನ ಪೋಲಿಸ್ ಕಸ್ಟಡಿ; ಕೋರ್ಟ್ ಆದೇಶ

ಮಹಿಳೆ ಅಪಹರಣ ಹಾಗೂ ಅಕ್ರಮ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕ ಹೆಚ್. ಡಿ. ರೇವಣ್ಣ ಅವರ ಆಪ್ತ ಸತೀಶ್ ಬಾಬಣ್ಣಗೆ 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನಗರದ ನ್ಯಾಯಾಲಯವೊಂದು ಸೋಮವಾರ ಆದೇಶ ನೀಡಿದೆ.

ಮಹಿಳೆ ಅಪಹರಣ ಪ್ರಕರಣ: ರೇವಣ್ಣ ಆಪ್ತ ಸತೀಶ್ ಬಾಬಣ್ಣಗೆ  8 ದಿನ ಪೋಲಿಸ್ ಕಸ್ಟಡಿ; ಕೋರ್ಟ್ ಆದೇಶ
ರೇವಣ್ಣ ಆಪ್ತ ಸತೀಶ್ ಬಾಬಣ್ಣ
Published On :

ಬೆಂಗಳೂರು: ಮಹಿಳೆ ಅಪಹರಣ ಹಾಗೂ ಅಕ್ರಮ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕ ಹೆಚ್.ಡಿ. ರೇವಣ್ಣ ಅವರ ಆಪ್ತ ಸತೀಶ್ ಬಾಬಣ್ಣಗೆ 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನಗರದ ನ್ಯಾಯಾಲಯವೊಂದು ಸೋಮವಾರ ಆದೇಶ ನೀಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಅಪಹರಣ ಪ್ರಕರಣದಲ್ಲಿ ಸತೀಶ್ ಬಾಬಣ್ಣ ಅವರನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಿದ ವಿಶೇಷ ತನಿಖಾ ತಂಡ, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಮನವಿ ಮಾಡಿತು.

ಸಂತ್ರಸ್ತೆಯ 20 ವರ್ಷದ ಮಗ ಮೈಸೂರಿನಲ್ಲಿ ಕೆ.ಆರ್. ನಗರದಲ್ಲಿ ದಾಖಲಿಸಿದ್ದ ದೂರಿನ ಆಧಾರದ ಮೇಲೆ ಬಾಬಣ್ಣ ಅವರನ್ನು ಬಂಧಿಸಲಾಗಿತ್ತು. ಆಕೆಯ ಬಂಧನದ ನಂತರ ತನ್ನ ತಾಯಿಗೆ ಜೀವ ಬೆದರಿಕೆಯಿದೆ ಎಂದು ಅವರು ಹೇಳಿದ್ದರು. ಹೇಳಿಕೆ ದಾಖಲಿಸಿಕೊಳ್ಳಲು ಪೊಲೀಸರು ಬಂದರೆ ಆಕೆಯನ್ನು ಬಂಧಿಸಬಹುದು ಎಂದು ಹೇಳಿ ಸತೀಶ್ ಬಾಬಣ್ಣ ತನ್ನ ತಾಯಿಯನ್ನು ಬೈಕ್ ನಲ್ಲಿ ಕರೆದೊಯ್ದಿದ್ದರು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದರು. ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಗುರಿಯಾದ ಮಹಿಳೆಯರ ವಿಡಿಯೋ ವೈರಲ್ ಆದ ಬಳಿಕ ಅದರಲ್ಲಿ ಸಂತ್ರಸ್ತೆ ಗುರುತು ಪತ್ತೆಯಾದ ನಂತರ ದೂರು ದಾಖಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.