ರಣಬಿಸಿಲು: ಬೀದರ್‌ನಲ್ಲಿ ಲೋಕಸಭೆ ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತವಾಗಿ ಅಧಿಕಾರಿ ಸಾವು
ಲೋಕಸಭೆ ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿಟಗುಪ್ಪಾ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ನಡೆದಿದೆ.

ಬೀದರ್: ಲೋಕಸಭೆ ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿಟಗುಪ್ಪಾ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಸಹಾಯಕ ಕೃಷಿ ಅಧಿಕಾ 31 ವರ್ಷದ ಆನಂದ್ ಎಂದು ಗುರುತಿಸಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೀದರ್ ಸೇರಿದಂತೆ 14 ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಕೋಡಂಬಲ್ ಚೆಕ್ಪೋಸ್ಟ್ನಲ್ಲಿ ಕರ್ತವ್ಯ ನಿರ್ವಹಿಸುವಾಗ ಆನಂದ್ ಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುಲು ಮುಂದಾಗಿದ್ದು ಆದರೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಬಾಗಲಕೋಟೆ: ಬಸ್ ಹತ್ತುತ್ತಿದ್ದ ವೇಳೆ ಹೃದಯಾಘಾತದಿಂದ ಸಿಬ್ಬಂದಿ ಸಾವು!
ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನದ ಸಲುವಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು, ಬಸ್ ಹತ್ತುವ ವೇಳೆ ದಿಢೀರ್ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆಯ ಮುಧೋಳ ನಗರದಲ್ಲಿ ನಡೆದಿದೆ. ಶಿಕ್ಷಕನನ್ನು ಗೋವಿಂದಪ್ಪ ಸಿದ್ದಾಪುರ ಎಂದು ಗುರುತಿಸಲಾಗಿದೆ. ಬಸ್ ನಿಲ್ದಾಣದ ಗೇಟ್ ಬಳಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ಹತ್ತಲು ಬಂದಿದ್ದ ವೇಳೆ ಅವಘಡ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



