ರಾಜ್ಯ

ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ

ಮೂಡುಬಿದಿರೆಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಮೈಸೂರಿನ ಸಿಎಂ ದಿವ್ಯಾ (18) ಎಂದು ಗುರುತಿಸಲಾಗಿದೆ.

ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
Published On :

ಮಂಗಳೂರು: ಮೂಡುಬಿದಿರೆಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮೃತರನ್ನು ಮೈಸೂರಿನ ಸಿಎಂ ದಿವ್ಯಾ (18) ಎಂದು ಗುರುತಿಸಲಾಗಿದೆ.

ಬಾಲಕಿಯ ಪೋಷಕರು ಮೂಡುಬಿದಿರೆ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರಕಾರ, ದಿವ್ಯಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಮತ್ತು ನೀಟ್ ಪರೀಕ್ಷೆಯಲ್ಲಿ ಅಂಕ ಬರುವುದಿಲ್ಲ ಎಂಬ ಭಯದಲ್ಲಿದ್ದಳು ಎಂದಿದ್ದಾರೆ.

ದಿವ್ಯಾ ಭಾನುವಾರ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ಶನಿವಾರ ತಡರಾತ್ರಿಯೇ ಹಾಸ್ಟೆಲ್ ಕೋಣೆಯಲ್ಲಿ ವಿದ್ಯಾರ್ಥಿನಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.