SIT ವಿಚಾರಣೆ ವೇಳೆ, ನ್ಯಾಯಾಧೀಶರ ಮುಂದೆಯೂ ಕೈಯ್ಯಲ್ಲಿ 3 ನಿಂಬೆಹಣ್ಣು ಹಿಡಿದಿದ್ದ ಎಚ್.ಡಿ.ರೇವಣ್ಣ!
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ.

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ.
ಎಸ್ ಐ ಟಿ ಅಧಿಕಾರಿಗಳ ವಿಚಾರಣೆ ವೇಳೆ ಹಾಗೂ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಂದರ್ಭದಲ್ಲಿ ಎಚ್.ಡಿ.ರೇವಣ್ಣ ಅವರು ಮೂರು ನಿಂಬೆಹಣ್ಣು ಕೈಯಲ್ಲಿ ಹಿಡಿದುಕೊಂಡಿದ್ದರು. ಪೊಲೀಸ್ ವಾಹನದಿಂದ ಇಳಿದಿದ್ದ ರೇವಣ್ಣ, ನಿಂಬೆ ಹಣ್ಣುಗಳ ಸಮೇತ ನ್ಯಾಯಾಧೀಶರ ಮನೆಯತ್ತ ಹೆಜ್ಜೆ ಹಾಕಿದರು. ವಿಶೇಷ ಕೊಠಡಿಯಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೂ ರೇವಣ್ಣ ನಿಂಬೆ ಹಣ್ಣು ಬಿಟ್ಟಿರಲಿಲ್ಲ.
ವಿಚಾರಣೆ ವೇಳೆ ನ್ಯಾಯಾಧೀಶರ ಎದುರು ಕಣ್ಣೀರು ಹಾಕಿದ್ದ ರೇವಣ್ಣ, ‘ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ. ರಾಜಕೀಯ ಬೆಳವಣಿಗೆ ಸಹಿಸದವರು ಈ ರೀತಿ ಮಾಡಿದ್ದಾರೆ. ನನಗೆ ನ್ಯಾಯ ಕೊಡಿ’ ಎಂದು ಮನವಿ ಮಾಡಿದ್ದಾರೆಂದು ತಿಳಿದು ಬಂದಿದೆ.
ನ್ಯಾಯಾಧೀಶರ ನಿವಾಸದಲ್ಲಿ ಎಚ್.ಡಿ. ರೇವಣ್ಣ ಪರ ವಕೀಲ ಮತ್ತು ಎಸ್ಐಟಿ ಅಧಿಕಾರಿಗಳ ನಡುವಿನ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಅವರು, ರೇವಣ್ಣರನ್ನು ಮೇ.08ರವರೆಗೆ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ರಾಷ್ಟ್ರಮಟ್ಟದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಒಂದೆಡೆ ವಿದೇಶಕ್ಕೆ ಹಾರಿರುವ ಪ್ರಜ್ವಲ್ ಬಂಧಿಸಲು ಎಸ್ಐಟಿ ಅಧಿಕಾರಿಗಳು ಏರ್ಪೋರ್ಟ್ನಲ್ಲಿ ಕಾದು ಕುಳಿತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



