ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಭೇಟಿ ಮಾಡಿ ಆತ್ಮಸ್ಥೈರ್ಯ ತುಂಬಿದ ಜೆಡಿಎಸ್ ನಾಯಕರು
ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಬಂಧನ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಿಂದ ವಿದೇಶಕ್ಕೆ ಹಾರಿ ಹೋಗಿರುವ ಪ್ರಜ್ವಲ್ ರೇವಣ್ಣ ಅವರಿಂದ ತೀವ್ರ ನೋವಿನಲ್ಲಿ ಇರುವ ಭವಾನಿ ರೇವಣ್ಣ ಅವರಿಗೆ ಸೋಮವಾರ ಜೆಡಿಎಸ್ ನಾಯಕರು ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಹಾಸನ: ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಬಂಧನ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಿಂದ ವಿದೇಶಕ್ಕೆ ಹಾರಿ ಹೋಗಿರುವ ಪ್ರಜ್ವಲ್ ರೇವಣ್ಣ ಅವರಿಂದ ತೀವ್ರ ನೋವಿನಲ್ಲಿ ಇರುವ ಭವಾನಿ ರೇವಣ್ಣ ಅವರಿಗೆ ಸೋಮವಾರ ಜೆಡಿಎಸ್ ನಾಯಕರು ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಶ್ರವಣಬೆಳಗೊಳದ ಶಾಸಕ ಸಿ.ಎನ್.ಬಾಲಕೃಷ್ಣ, ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಸೇರಿದಂತೆ ಪಕ್ಷದ ಹಿರಿಯ ಕಾರ್ಯಕರ್ತರು ಸೋಮವಾರ ಭವಾನಿ ರೇವಣ್ಣ ಅವರನ್ನು ಹೊಳೆನರಸೀಪುರದ ನಿವಾಸದಲ್ಲಿ ಭೇಟಿ ಮಾಡಿದರು.
ಮಹಿಳೆಯೊಬ್ಬರನ್ನು ಅಪಹರಿಸಿದ ಆರೋಪದ ಮೇಲೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿರುವ ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ನಾಯಕರು ಚರ್ಚೆ ನಡೆಸಿದರು.
ಪಕ್ಷದ ಹಿತದೃಷ್ಟಿಯಿಂದ ಜೆಡಿಎಸ್ ನಾಯಕರ ಮುಂದಿನ ನಡೆ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಭಾನುವಾರ ಹಾಸನದಲ್ಲಿ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು ಕೂಡಿ ಧರಣಿ ನಡೆಸುವ ಮೂಲಕ ರೇವಣ್ಣ ಬಂಧನವನ್ನು ತೀವ್ರವಾಗಿ ಖಂಡಿಸಿದರು. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಾಲಕೃಷ್ಣ, ಎಸ್‌ಐಟಿ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ರೇವಣ್ಣ ಅವರು ಯಾವುದೇ ವಿಚಾರದಲ್ಲಿ ಭಾಗಿಯಾಗಿಲ್ಲವಾದ್ದರಿಂದ ಅವರನ್ನು ಬಿಡುಗಡೆ ಮಾಡಬೇಕು ಎಂದರು.
ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಪ್ರಕರಣ, ವೀಡಿಯೋದಲ್ಲಿರುವ ಸಂತ್ರಸ್ಥ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಬಂಧನ ವಿಚಾರದಿಂದ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರು ಆಘಾತಕ್ಕೆ ಒಳಗಾಗಿದ್ದಾರೆ. ಅಲ್ಲದೆ ಈ ಪ್ರಕರಣ ಹೊರ ಬರುತ್ತಿದ್ದಂತೆ ಭವಾನಿ ರೇವಣ್ಣ ಅವರು ಎಲ್ಲೂ ಹೋಗದೆ ಮನೆಯಲ್ಲೇ ಇದ್ದಾರೆ. ಹೀಗಾಗಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಜೆಡಿಎಸ್ ನಾಯಕರು ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



