ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕಾರ್ತಿಕೇಯನ್ ಹತ್ಯೆ
ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ದುಷ್ಕರ್ಮಿಗಳು ಮಂಗಳವಾರ ರಾತ್ರಿ ರೌಡಿಶೀಟರ್ ಕಾರ್ತಿಕೇಯನ್(40) ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಬೆಂಗಳೂರು: ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ದುಷ್ಕರ್ಮಿಗಳು ಮಂಗಳವಾರ ರಾತ್ರಿ ರೌಡಿಶೀಟರ್ ಕಾರ್ತಿಕೇಯನ್(40) ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ದುಷ್ಕರ್ಮಿಗಳು ಇಂದು ಸಂಜೆ ನಡುರಸ್ತೆಯಲ್ಲೇ ಅಟ್ಟಾಡಿಸಿ ಕಾರ್ತಿಕೇಯನ್ನನ್ನು ಹತ್ಯೆಗೈದು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಳೇ ದ್ವೇಷ ಹಾಗೂ ರಿಯಲ್ಎಸ್ಟೇಟ್ ವ್ಯವಹಾರದಲ್ಲಿ ಕಿರಿಕ್ ಆಗಿ ಹತ್ಯೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಈ ಕುರಿತು ಬಾಣಸವಾಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾರ್ತಿಕೇಯನ್ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್ ಕಾರ್ತಿಗೇಯನ್ ಗಡಿಪಾರಾಗಿದ್ದ. ನಂತರ ಮತ್ತೆ ಬೆಂಗಳೂರಿಗೆ ಬಂದು ಬಾಣಸವಾಡಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಕಚೇರಿ ತೆರೆದಿದ್ದ. ಆದರೆ, ಮಂಗಳವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



