ಸುರಪುರ ವಿಧಾನಸಭಾ ಉಪ ಚುನಾವಣೆ: ಶೇ.67ರಷ್ಟು ಮತದಾನ
ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಕಲ್ಲು ತೂರಾಟ ಘಟನೆಯನ್ನು ಹೊರತುಪಡಿಸಿದರೆ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ನಡೆದಿದ್ದು, ರಾತ್ರಿ 8 ಗಂಟೆ ವೇಳೆಗೆ ಕ್ಷೇತ್ರದಲ್ಲಿ ಶೇ.67ರಷ್ಟು ಮತದಾನವಾಗಿದೆ.

ಯಾದಗಿರಿ: ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಕಲ್ಲು ತೂರಾಟ ಘಟನೆಯನ್ನು ಹೊರತುಪಡಿಸಿದರೆ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ನಡೆದಿದ್ದು, ರಾತ್ರಿ 8 ಗಂಟೆ ವೇಳೆಗೆ ಕ್ಷೇತ್ರದಲ್ಲಿ ಶೇ.67ರಷ್ಟು ಮತದಾನವಾಗಿದೆ.
ಬಿಜೆಪಿಯಿಂದ ಮಾಜಿ ಸಚಿವ ರಾಜಾ ನರಸಿಂಹ ನಾಯಕ್ (ರಾಜುಗೌಡ) ಮತ್ತು ಕಾಂಗ್ರೆಸ್‌ನಿಂದ ರಾಜಾ ವೇಣುಗೋಪಾಲ್ ನಾಯಕ್ ಸೇರಿದಂತೆ ಆರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಈ ವರ್ಷದ ಜನವರಿಯಲ್ಲಿ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯ್ಕ್ ನಿಧನರಾದ ಹಿನ್ನೆಲೆಯಲ್ಲಿ ಉಪಚುನಾವಣೆ ಅನಿವಾರ್ಯವಾಗಿತ್ತು. ರಾಜಾ ವೆಂಕಟಪ್ಪ ಅವರ ಪುತ್ರ ರಾಜಾ ವೇಣುಗೋಪಾಲ್ ನಾಯಕ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಸುರಪುರ ವಿಧಾನಸಭಾ ಕ್ಷೇತ್ರದ ಮತದಾರರು ಅದೇ ದಿನ ರಾಯಚೂರು ಕ್ಷೇತ್ರಕ್ಕೆ ತಮ್ಮ ಶಾಸಕ ಮತ್ತು ಸಂಸದರನ್ನು ಆಯ್ಕೆ ಮಾಡಲು ಮತ ಚಲಾಯಿಸಿದರು. ಎರಡೂ ಚುನಾವಣೆಗಳ ಇವಿಎಂಗಳನ್ನು ಒಂದೇ ವಿಭಾಗದಲ್ಲಿ ಇರಿಸಲಾಗಿತ್ತು.
ಮತದಾರರು ಮತದಾನದ ವಿಭಾಗವನ್ನು ಪ್ರವೇಶಿಸಿದ ನಂತರ ಎರಡೂ ಇವಿಎಂಗಳ ಬಟನ್‌ಗಳನ್ನು ಒತ್ತುವಂತೆ ಸೂಚಿಸಲಾಗಿತ್ತು. ಇವಿಎಂಗಳನ್ನು ಒಂದೇ ಕಂಪಾರ್ಟ್‌ಮೆಂಟ್‌ನಲ್ಲಿ ಇರಿಸಿದ್ದರಿಂದ ಉಪ ಚುನಾವಣೆಯಲ್ಲಿ ಶಾಸಕರ ಆಯ್ಕೆಗಾಗಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಸಂಸದರ ಆಯ್ಕೆಗಾಗಿ ಮತದಾರರು ಏಕಕಾಲದಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



