ರಾಜ್ಯ

SIT ಕಸ್ಟಡಿ ಇಂದು ಅಂತ್ಯ: ಮಾಜಿ ಸಚಿವ ರೇವಣ್ಣಗೆ ಜೈಲಾ, ಬೇಲಾ?

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜ್ಯನ್ಯ ಹಾಗೂ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಹೆಚ್​ಡಿ ರೇವಣ್ಣ ವಿರುದ್ಧ ಕಸ್ಟಡಿ ಬುಧವಾರ ಅಂತ್ಯವಾಗುತ್ತಿದ್ದು, ಇಂದು ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

SIT ಕಸ್ಟಡಿ ಇಂದು ಅಂತ್ಯ: ಮಾಜಿ ಸಚಿವ ರೇವಣ್ಣಗೆ ಜೈಲಾ, ಬೇಲಾ?
ಹೆಚ್ ಡಿ ರೇವಣ್ಣ
Published On :

ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜ್ಯನ್ಯ ಹಾಗೂ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಹೆಚ್​ಡಿ ರೇವಣ್ಣ ವಿರುದ್ಧ ಕಸ್ಟಡಿ ಬುಧವಾರ ಅಂತ್ಯವಾಗುತ್ತಿದ್ದು, ಇಂದು ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಸ್​ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದು, ರೇವಣ್ಣ ಆಪ್ತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಎಸ್​ಐಟಿ ಕಸ್ಟಡಿಯಲ್ಲಿರುವ ರೇವಣ್ಣ ಜಾಮೀನಿಗೆ ಅವರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಕಸ್ಟಡಿಯಲ್ಲಿರೋ ವ್ಯಕ್ತಿಗೆ ಜಾಮೀನು ಕೊಡುವುದು ಹೇಗೆ ಎಂದು ನ್ಯಾಯಾಧೀಶರು ರೇವಣ್ಣ ಪರ ವಕೀಲರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ವಕೀಲರು ವಾದ ಮುಂದಿಟ್ಟಿದ್ದಾರೆ. ಆದರೂ ಈ ಬಗ್ಗೆ ಎಸ್‌ಐಟಿ ಪ್ರತಿಕ್ರಿಯಿಸಲಿ ,ಎಂದು ಎಸ್​ಐಟಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು.

ಕಿಡ್ನ್ಯಾಪ್​ ಪ್ರಕರಣದಲ್ಲಿ ಎಸ್​ಐಟಿ ವಶದಲ್ಲಿರುವ ರೇವಣ್ಣ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಹೀಗಾಗಿ ರೇವಣ್ಣಗೆ ಇಂದು ನಿರ್ಣಾಯಕ ದಿನ ಆಗಿದೆ. ರೇವಣ್ಣಗೆ ಬೇಲ್ ಸಿಗುತ್ತಾ ಮತ್ತೆ ಕಸ್ಟಡಿಗೆ ತೆಗೆದುಕೊಳ್ತಾರಾ ಅಥವಾ ಜೈಲು ಪಾಲಾಗ್ತಾರಾ ಎಂಬ ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.