ರಾಜ್ಯ

ನಾಳೆ SSLC ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳು ಈ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಿ...

ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ.

ನಾಳೆ SSLC ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳು ಈ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಿ...
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ.

ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ನಾಳೆ ಬೆಳಗ್ಗೆ 10.30ರ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Story image

ಕರ್ನಾಟಕ ಸರ್ಕಾರದ ಎಸ್ ಎಸ್ ಎಲ್ ಸಿ ಪರೀಕ್ಷೆ 2024 ಮಾರ್ಚ್ 25 ರಿಂದ ಏಪ್ರಿಲ್ 6ರ ನಡುವೆ ನಡೆಯಿತು. ಈ ಬಾರಿ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರಿದ್ದರು. ಇದಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕೂಡ ಇವರಲ್ಲೇ ಸೇರಿಕೊಂಡು ಪರೀಕ್ಷೆ ಬರೆದಿದ್ದಾರೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.