ರಾಜ್ಯ

ಮಹಿಳೆ ಅಪಹರಣ ಪ್ರಕರಣ: ರೇವಣ್ಣ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚನೆ

ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಪೂರಕವಾಗಿ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್‌ ಮುಖಂಡ ಎಚ್‌ ಡಿ ರೇವಣ್ಣರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಮಂಗಳವಾರ ಆದೇಶಿಸಿದೆ.

ಮಹಿಳೆ ಅಪಹರಣ ಪ್ರಕರಣ: ರೇವಣ್ಣ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚನೆ
ಹೆಚ್ ಡಿ ರೇವಣ್ಣ
Published On :

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಪೂರಕವಾಗಿ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್‌ ಮುಖಂಡ ಎಚ್‌ ಡಿ ರೇವಣ್ಣರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಮಂಗಳವಾರ ಆದೇಶಿಸಿದೆ.

ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಇಂದು ನಡೆಸಿದರು.

ವಿಚಾರಣೆ ಆರಂಭವಾಗುತ್ತಿದ್ದಂತೆ ನ್ಯಾಯಾಧೀಶರು ''ಆರೋಪಿ ಎಸ್‌ಐಟಿ ವಶದಲ್ಲಿದ್ದಾರೆ. ಹೀಗಿದ್ದಾಗ ಜಾಮೀನು ಅರ್ಜಿ ವಿಚಾರಣೆ ಮಾಡಲು ಹೇಗೆ ಸಾಧ್ಯ‌? ಒಂದು ವೇಳೆ‌ ಜಾಮೀನು ನೀಡಿದರೆ ಪೊಲೀಸ್ ಕಸ್ಟಡಿ ಹೇಗೆ ಮುಂದುವರಿಸಲು ಸಾಧ್ಯ?'' ಎಂದು ರೇವಣ್ಣ ಪರ ಹಿರಿಯ ವಕೀಲ ಸಿ ವಿ ನಾಗೇಶ್‌ ಅವರನ್ನು ಪ್ರಶ್ನಿಸಿದರು.

ಇದಕ್ಕೆ ನಾಗೇಶ್‌ ಅವರು ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೂ ಜಾಮೀನು ನೀಡಬಹುದು ಎಂದು ಸುಪ್ರೀಂ ಕೋರ್ಟ್‌ನ ಕೆಲವು ತೀರ್ಪುಗಳನ್ನು ಉಲ್ಲೇಖಿಸಿದರು.

ಆಗ ನ್ಯಾಯಾಲಯವು ಎಸ್ಐಟಿ ಪರ ವಿಶೇಷ ಸರ್ಕಾರಿ ಅಭಿಯೋಜಕರಿಗೆ ನೋಟಿಸ್ ಜಾರಿ ಮಾಡಿತು. ಅಲ್ಲದೇ, ಆರೋಪಿಯು ಪೊಲೀಸ್ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಬಹುದೇ ಎಂಬುದಕ್ಕೂ ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿ, ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆ ಮುಂದೂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.