ರಾಜ್ಯ

SSLC results: ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ; ಶೇ.73.40 ವಿದ್ಯಾರ್ಥಿಗಳು ತೇರ್ಗಡೆ, ಉಡುಪಿ ಜಿಲ್ಲೆ ಪ್ರಥಮ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಮತ್ತು kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.

SSLC results: ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ; ಶೇ.73.40 ವಿದ್ಯಾರ್ಥಿಗಳು ತೇರ್ಗಡೆ, ಉಡುಪಿ ಜಿಲ್ಲೆ ಪ್ರಥಮ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಮತ್ತು kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್​ 25 ರಿಂದ ಏಪ್ರಿಲ್​ 6ರವರೆಗೆ ಪರೀಕ್ಷೆ ನಡೆದಿತ್ತು.

8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು: ಕರ್ನಾಟಕದಲ್ಲಿ ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರು. ಅಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕರ್ನಾಟಕದ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಲಾದ ಮಾರ್ಕ್ ಶೀಟ್ ತಾತ್ಕಾಲಿಕ: ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಲಾದ ಆನ್‌ಲೈನ್ ಮಾರ್ಕ್ ಶೀಟ್ ತಾತ್ಕಾಲಿಕವಾಗಿರುವುದರಿಂದ, ವಿದ್ಯಾರ್ಥಿಗಳು ತಮ್ಮ ಶಾಲೆಗಳ ಅಧಿಕೃತ ಸೂಚನೆಯ ಪ್ರಕಾರ ಫಲಿತಾಂಶಗಳನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ತಮ್ಮ ಶಾಲೆಗಳಿಂದ SSLC ಮಾರ್ಕ್‌ಶೀಟ್ ಪಡೆಯಬೇಕು.

ಪಾಸಾದರೂ ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ-2, ಪರೀಕ್ಷೆ-3ಕ್ಕೆ ಅವಕಾಶ: ವಿದ್ಯಾರ್ಥಿಗಳು ಪಾಸಾಗಲಿ ಅಥವಾ ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯಲು ಅವಕಾಶವಿದೆ. ಪಾಸಾದರೂ ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು.

ಈ ಬಾರಿಯ ಫಲಿತಾಂಶ ಪ್ರಮಾಣ ಶೇ 73.40 ಆಗಿದ್ದು, ಕಳೆದ ಬಾರಿಗಿಂತ ಶೇ 10ರಷ್ಟು ಕಡಿಮೆ ಆಗಿದೆ. ಕಳೆದ ವರ್ಷ ಶೇ 83.89ರಷ್ಟು ಫಲಿತಾಂಶ ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.