ರಾಜ್ಯ

ಮೈಸೂರು: ಕಾಲೇಜಿನಲ್ಲಿ ಶ್ರೀರಾಮನ ಹಾಡು ಹಾಡಿದ ಗಾಯಕ ಶ್ರೀಹರ್ಷ, ಮುಸ್ಲಿಂ ವಿದ್ಯಾರ್ಥಿಗಳಿಂದ ಗಲಾಟೆ, ವಿಡಿಯೋ ವೈರಲ್

ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಗಲಾಟೆ ಮಾಡಿದ ಘಟನೆ ನಡೆದಿದೆ.

ಮೈಸೂರು: ಕಾಲೇಜಿನಲ್ಲಿ ಶ್ರೀರಾಮನ ಹಾಡು ಹಾಡಿದ ಗಾಯಕ ಶ್ರೀಹರ್ಷ, ಮುಸ್ಲಿಂ ವಿದ್ಯಾರ್ಥಿಗಳಿಂದ ಗಲಾಟೆ, ವಿಡಿಯೋ ವೈರಲ್
ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಗಲಾಟೆ
Published On :

ಮೈಸೂರು: ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಗಲಾಟೆ ಮಾಡಿದ ಘಟನೆ ನಡೆದಿದೆ.

ಸಮಾರಂಭಕ್ಕೆ ಗಾಯಕ ಶ್ರೀಹರ್ಷ ಅವರನ್ನು ಕರೆಸಲಾಗಿತ್ತು. ವೇದಿಕೆ ಮೇಲೆ ಶ್ರೀಹರ್ಷ ಜಯತು ಜಯತು ಜೈ ಶ್ರೀರಾಮ್ ಎಂದು ಹಾಡಿದರು. ಈ ವೇಳೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ ಮುಸ್ಲಿಂ ವಿದ್ಯಾರ್ಥಿಗಳು ಗಲಾಟೆ ಮಾಡಿದ್ದಾರೆ.

ಕಾರ್ಯಕ್ರಮವನ್ನು ಹಾಳುಗೆಡವಿದ್ದಲ್ಲದೆ ಒಬ್ಬ ಹಿಂದೂ ವಿದ್ಯಾರ್ಥಿಗೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಗಲಾಟೆ ಶುರುವಾಗುತ್ತಿದಂತೆ ಪೊಲೀಸರು ಸ್ಟೇಡಿಯಂಗೆ ಬಂದು ವಿದ್ಯಾರ್ಥಿಗಳನ್ನು ಅಲ್ಲಿಂದ ಕಳುಹಿಸಿದ್ದಾರೆ. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದು ನೆಟ್ಟಿಗರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ನಾವು ಕರ್ನಾಟಕದಲ್ಲಿದ್ದೇವಾ ಅಥವಾ ಪಾಕಿಸ್ತಾನದಲ್ಲಿ ಇದ್ದೇವಾ. ಇವರ ಹಾವಳಿ ಜಾಸ್ತಿಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.