ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: SPP ಬಿ ಎನ್ ಜಗದೀಶ್ ರಾಜೀನಾಮೆ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡ (SIT) ಪರ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯುಂಟಾಗಿದೆ.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡ (SIT) ಪರ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯುಂಟಾಗಿದೆ.
ಎಸ್‌ಐಟಿ ರಚನೆಯಾಗಿರುವ ಅಪರಾಧ ತನಿಖಾ ವಿಭಾಗದ (CID) ಮುಖ್ಯಸ್ಥರಿಗೆ ಅವರ ರಾಜೀನಾಮೆಯನ್ನು ದೃಢಪಡಿಸಿದ ಮೂಲಗಳು, ವಿಚಾರಣಾ ನ್ಯಾಯಾಲಯ ಮತ್ತು ಸೆಷನ್‌ಗಳ ಮುಂದೆ ಪ್ರಾಸಿಕ್ಯೂಷನ್ ನ್ನು ಸಮರ್ಥಿಸಲು ರಾಜ್ಯ ಸರ್ಕಾರವು ಇಬ್ಬರು ಹಿರಿಯ ವಕೀಲರನ್ನು ಹೆಚ್ಚುವರಿ ಎಸ್‌ಪಿಪಿಗಳಾಗಿ ನೇಮಿಸಿದ ನಂತರ ಜಗದೀಶ್ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ನ್ಯಾಯಾಲಯ ವ್ಯವಹರಿಸುತ್ತದೆ.
ಹೆಚ್ಚುವರಿ ಎಸ್‌ಪಿಪಿಗಳ ನೇಮಕ;
ಹಿರಿಯ ವಕೀಲರಾದ ಅಶೋಕ್ ಎನ್ ನಾಯಕ್ ಮತ್ತು ಜಯ್ನಾ ಕೊಠಾರಿ ಅವರನ್ನು ಹೆಚ್ಚುವರಿ ಎಸ್‌ಪಿಪಿಗಳಾಗಿ ಸರ್ಕಾರ ನೇಮಿಸಿದೆ. ಈ ಎರಡು ನೇಮಕಾತಿಗಳು ತನ್ನದೇ ಆದ ಕಾರಣಗಳಿಗಾಗಿ ಜಗದೀಶ ಅವರನ್ನು ಬದಲಾಯಿಸಲು ರಾಜ್ಯ ಸರ್ಕಾರ ನಡೆಸಿದ ಪ್ರಯತ್ನವಾಗಿದೆ ಎಂದು ಮೂಲಗಳು ತಿಳಿಸಿವೆ.
ಆದರೆ, ಯಾವುದೇ ಸಕಾರಣವಿಲ್ಲದೇ ಏಕಾಏಕಿ ಬದಲಾವಣೆ ಮಾಡಿದರೆ ತಪ್ಪು ಸಂದೇಶ ಬರಲಿದೆ ಎಂದು ಮನಗಂಡ ರಾಜ್ಯ ಸರ್ಕಾರ, ಬದಲಿ ಅಧಿಸೂಚನೆ ಹೊರಡಿಸುವ ಮುನ್ನವೇ ಹಿಂಪಡೆದಿದ್ದು, ಇಬ್ಬರು ಹಿರಿಯ ವಕೀಲರನ್ನು ಹೆಚ್ಚುವರಿ ಎಸ್‌ಪಿಪಿಗಳನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ.
ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸುತ್ತಿದ್ದ ವಿಶೇಷ ನ್ಯಾಯಾಲಯ ಹಾಗೂ ಶಾಸಕರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಎಸ್‌ಐಟಿ ಪರವಾಗಿ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಜಗದೀಶ ಹಾಜರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


