ಅಶ್ಲೀಲ ವಿಡಿಯೋ ಪ್ರಕರಣ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು!
ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

ಬೆಂಗಳೂರು: ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.
ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾದ ಎರಡನೇ ಪ್ರಕರಣವಾಗಿದೆ.
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ವಿಡಿಯೋದಲ್ಲಿದ್ದ ಕೆಲ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಮಹಿಳೆಯೊಬ್ಬರು ಎಸ್ಐಟಿ ಅಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ.
ಈ ಹೇಳಿಕೆ ಆಧರಿಸಿ ಅಧಿಕಾರಿಗಳು ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪದಡಿ ದಾಖಲಾಗಿದ್ದ ಎಫ್ಐಆರ್ಗೆ ಹೊಸದಾಗಿ ಐಪಿಸಿ ಸೆಕ್ಷನ್ 376 ಅನ್ನು ಸೇರ್ಪಡೆಗೊಳಿಸುವ ಮೂಲಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ತಮ್ಮ ಮನೆಯ ಮಹಿಳಾ ಕೆಲಸದಾಳಿಗೆ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನಿಗೆ ಎಸ್ಐಟಿ ನೋಟಿಸ್ ನೀಡಿದೆ. ಆದರೆ ಎಸ್ಐಟಿ ವಿಚಾರಣೆಗೆ ಹಾಜರಾಗದೆ ಕಾಲಾವಕಾಶ ಕೋರಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಎರಡನೇ ದೂರು ದಾಖಲಾಗಿರುವುದು ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ತಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



